Share this news

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿ ವೈಯಕ್ತಿಕ ಕಾರಣ ನೀಡಿ ಸ್ವಯಂ ನಿವೃತ್ತಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.ಮುಂಬರುವ ಏಪ್ರಿಲ್ 30ರಂದು ಸೇವೆಯಿಂದ ನಿವೃತ್ತಿಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ‌

ಪ್ರತಾಪ್ ರೆಡ್ಡಿ ಅವರು ಸದ್ಯ ಆಂತರಿಕ ಭದ್ರತಾ ವಿಭಾಗದ ಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ನಿವೃತ್ತಿಗೆ ಕೇವಲ 2 ತಿಂಗಳು ಬಾಕಿ ಇರುವಾಗಲೇ ಇಲಾಖೆಯಿಂದ ಬಿಡುಗಡೆ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಮನವಿ ಪುರಸ್ಕರಿಸಿರುವ ರಾಜ್ಯ ಸರ್ಕಾರ ಏಪ್ರಿಲ್ 30ಕ್ಕೆ ಬಿಡುಗಡೆಗೊಳಿಸುವಂತೆ ಸೂಚಿಸಿ ಆದೇಶಿಸಿದೆ.

 

Leave a Reply

Your email address will not be published. Required fields are marked *