Share this news

ಉಡುಪಿ: ಹಿರಿಯ ಪತ್ರಕರ್ತ ಹಾಗೂ ಚಿಂತಕ ಶಶಿಧರ ಹೆಮ್ಮಣ್ಣ(57) ಗುರುವಾರ ತಡರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.

ಗುರವಾರ ಬೆಳಿಗ್ಗೆ ಮನೆಯಲ್ಲಿದ್ದ ಸಂದರ್ಭದಲ್ಲಿ ಹಠಾತ್‌ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ತಪಾಸಣೆ ನಡೆಸಿದ ವೈದ್ಯರು
ಹೃದಯಾಘಾತ ಸಂಭವಿಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿಮಧ್ಯೆ ಹೆಮ್ಮಣ್ಣ ತೀವ್ರ ಅಸ್ವಸ್ಥಗೊಂಡಿದ್ದರು.ಬಳಿಕ ಅವರಿಗೆ ಮಣಿಪಾಲ ಅಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು,ಆದರೆ ಗುರುವಾರ ತಡರಾತ್ರಿ ಚಿಕಿತ್ಸೆ ಫಲಿಸದೇ ಶಶಿಧರ ಹೆಮ್ಮಣ್ಣ ನಿಧನರಾದರು.
1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ – “ಕ್ಷಿತಿಜ” ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿ, ಮುಖ್ಯ ಸಂಪಾದಕರಾಗಿದ್ದರು.ಬಳಿಕ ಈ ಟಿವಿ ಕನ್ನಡ,ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಹಲವು ಉದಯೋನ್ಮುಖ ಪತ್ರಕರ್ತರಿಗೆ ಪ್ರೇರಕರಾಗಿದ್ದ ಹೆಮಣ್ಣ ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಲೇಖನಗಳನ್ನು ಬರೆದು ಸರಕಾರದ ಗಮನ ಸೆಳೆಯುವಲ್ಲಿ ಪ್ಲಮುಖ ಪಾತ್ರ ವಹಿಸಿದ್ದರು.

ಇತ್ತೀಚೆಗಷ್ಟೇ ಕನೆಕ್ಟ್ ಮಿಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ, ಹಲವು ಯೋಜನೆಗಳನ್ನು ರಾಜ್ಯದಾದ್ಯಂತ ಅರಂಭಿಸುವ ಕಾರ್ಯ ದಲ್ಲಿ ತೊಡಗಿಸಿಕೊಂಡಿದ್ದರು.ರಾಜಕೀಯ ಸಮೀಕ್ಷೆಗಳಲ್ಲಿ ಎತ್ತಿದ ಕೈಯಾಗಿದ್ದ ಇವರಿಗೆ ಹಲವಾರು ರಾಜಕೀಯ ನಾಯಕರನ್ನು ಬೆಳೆಸಿದ ಕೀರ್ತಿ ಸಲ್ಲುತ್ತದೆ.
ಮೃತರು ತಂದೆ,ತಾಯಿ,ಪತ್ನಿ,ಪುತ್ರ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಹಿರಿಯ ಪತ್ರಕರ್ತ ಶಶಿಧರ ಹೆಮ್ಮಣ್ಣ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 

 

 

 

 

 

 

 

Leave a Reply

Your email address will not be published. Required fields are marked *