ಕಾರ್ಕಳ:ಜೀವನದಲ್ಲಿ ಜುಗುಪ್ಸೆಗೊಂಡು ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕುಂದೇಶ್ವರ ನಿವಾಸಿ
ಸಂಪತ್ ಭಂಡಾರಿ (30 ) ಆತ್ಮಹತ್ಯೆ ಮಾಡಿಕೊಂಡ ಯುವಕ.
ಅವರು ಬುಧವಾರ ಸಂಜೆಯಿಂದ ನಾಪತ್ತೆಯಾದವರು ಗುರುವಾರ ಮುಂಜಾನೆ ಅವರ ಶವ ಮನೆಯ ಬಾವಿಯಲ್ಲಿ ಪತ್ತೆಯಾಗಿದೆ.

ಸಂಪತ್ ಭಂಡಾರಿ ಹಿರ್ಗಾನದ ಮೂರೂರಿನಲ್ಲಿ ತನ್ನ ತಂದೆಯ ಜತೆ ಹೇರ್ ಡ್ರೆಸಸ್ ಶಾಪ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಸಾಕಷ್ಟು ಸಾಲ ಮಾಡಿಕೊಂಡಿದ್ದರು ಹಾಗೂ ಮದ್ಯವ್ಯಸನಿಯಾಗಿದ್ದರು ಎನ್ನಲಾಗಿದೆ.
ಇದೇ ಹಿನ್ನೆಲೆಯಲ್ಲಿ ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


