ಕಾರ್ಕಳ: ಕಾರ್ಕಳ ತಾಲೂಕು ಹಿರ್ಗಾನ ಬಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯಪುಸ್ತಕಗಳ ವಿತರಣೆ ಹಾಗೂ ದಾನಿಗಳಾದ ಸಿರಿಯಣ್ಣ ಶೆಟ್ಟಿ, ಅಶೋಕ್ ನಾಯಕ್ ಹಾಗೂ ಚೇತನ್ ಶೆಟ್ಟಿಯವರು ಕೊಡಮಾಡಿದ ನೋಟ್ ಪುಸ್ತಕಗಳ ಉಚಿತ ವಿತರಣಾ ಕಾರ್ಯಕ್ರಮವು ಜರುಗಿತು.
ಸಿರಿಯಣ್ಣ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಹಿರ್ಗಾನ ಪಂಚಾಯತ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಅಶೋಕ್ ನಾಯಕ್, ಚೇತನ್ ಶೆಟ್ಟಿ, ವರ್ಧನ್ ಗ್ರೂಪ್ ಆಫ್ ಕಂಪೆನಿಯ ಮಾಲಕರಾದ ಪ್ರವೀಣ್ ಕುಮಾರ್ ಹೆಗ್ಡೆ, ನಿವೃತ್ತ ಮುಖ್ಯೋಪಾಧ್ಯಾಯ ಎಂ. ರತ್ನಾಕರ ರಾವ್, ಎಸ್ ಡಿ ಎಂ ಸಿ ಅಧ್ಯಕ್ಷ ಮಹಾವೀರ್ ಜೈನ್, ಉಪಾಧ್ಯಕ್ಷೆ ಪ್ರೀತಿ, ಶಾಲಾ ಮುಖ್ಯೋಪಾಧ್ಯಾಯಿನಿ ಆಶಾ ಕ್ಲೇರಾ ವಾಸ್, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ ಪಿ ಪದ್ಮಾವತಿ ಉಪಸ್ಥಿತರಿದ್ದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಅಣ್ಣಪ್ಪ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.