ಕಾರ್ಕಳ : ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಮಾರುತಿ ಒಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ನಂತರ ಕಲ್ಲಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಬಂಟ್ವಾಳದ ಉಮರಬ್ಬ ಎಂಬವರು ಚಾಲಕ ಸಿರಾಜುದ್ದೀನ್ ಹಾಗೂ ಅಬ್ದುಲ್ಲ ಎಂಬವರೊAದಿಗೆ ಮಾರುತಿ ಓಮ್ನಿ ಕಾರಿನಲ್ಲಿ ವಾಮದಪದವಿನಿಂದ ಅಜೆಕಾರಿಗೆ ಹೋಗುತ್ತಿದ್ದಾಗ ಮುಂಜಾನೆ 3 ಗಂಟೆಯ ವೇಳೆಗೆ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಮತ್ತು ಕಲ್ಲಿಗೆ ಡಿಕ್ಕಿಯಾಗಿದೆ.
ಅಪಘಾತದ ಪರಿಣಾಮ ಅಬ್ದುಲ್ಲ ಹಾಗೂ ಉಮರಬ್ಬ ಗಾಯಗೊಂಡಿದ್ದು, ಇಬ್ಬರನ್ನೂ ಚಿಕಿತ್ಸೆಗಾಗಿ ನಿಟ್ಟೆ ಗಾಜ್ರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಉಮರಬ್ಬ ಅಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅಬ್ದುಲ್ಲ ಗಂಭೀರವಾಗಿ ಗಾಯಗೊಂಡಿರುವ ಕಾರಣ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.