ಬೆಂಗಳೂರು: ಹುಲಿ ಉಗುರು ಪೆಂಡೆAಟ್ ಧರಿಸಿಕೊಂಡಿದ್ದ ಆರೋಪದ ಮೇಲೆ ಅರಣ್ಯಾಧಿಕಾರಿಗಳಿಂದ ಬಂಧಿತನಾಗಿ ಜೈಲು ಸೇರಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌ಗೆ ಬೆಂಗಳೂರಿನ 2ನೇ ಎಸಿಜೆಂ ನ್ಯಾಯಾಲಯವು ಜಾಮೀನು ಮಂಜೂರುಗೊಳಿಸಿದೆ.
ವರ್ತೂರು ಸಂತೋಷ್ ಅವರು ಹುಲಿ ಉಗುರಿನ ಪೆಂಡೆAಟ್ ಧರಿಸಿದ್ದಾರೆ ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ವ್ಯಕ್ತಿಯೊಬ್ಬರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಅಧಿಕಾರಿಗಳು ಬಿಗ್ ಬಾಸ್ ಮನೆಯಿಂದಲೇ ಸಂತೋಷ್ ಅವರನ್ನು ವಶಕ್ಕೆ ಪಡೆದು ತೀವೃ ವಿಚಾರಣೆ ನಡೆಸಿ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ ಹುಲಿ ಉಗುರು ಇಟ್ಟುಕೊಳ್ಳುವುದು ಗಂಭೀರ ಅಪರಾಧವಾಗುತ್ತದೆ ಎನ್ನುವ ಕಾರಣಕ್ಕಾಗಿ ಹಾಗೂ ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸದಿದ್ದ ಹಿನ್ನಲೆಯಲ್ಲಿ ನ್ಯಾಯಾಧೀಶರು ಜಾಮೀನು ವಿಚಾರಣೆ ಬುಧವಾರಕ್ಕೆ ಮುಂದೂಡಿದ್ದರು.
ಇಂದು ಸಂತೋಷ್ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಧೀಶರು, ಸಂತೋಷ್‌ಗೆ ಷರತ್ತುಬದ್ದ ಜಾಮೀನು ನೀಡಿದ್ದಾರೆ, ಇಂದು ಸಂಜೆ ಸಂತೋಷ್ ಬಿಡುಗಡೆಯಾಗುವ ಸಾಧ್ಯತೆಯಿದೆ