ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರಕ್ಕೆ ಜನರ ನೈತಿಕ ಬೆಂಬಲ ಬೇಕು,ಈ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಮುಂದುವರಿಯಬೇಕಾದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲಿಸಿದರೆ 5 ವರ್ಷ ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯಲು ಸಾಧ್ಯ ಎಂದು ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಅವರು ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಸ್ಪೋಟಕ ಹೇಳಿಕೆ ನೀಡಿದ್ದು, ಯತೀಂದ್ರ ಹೇಳಿಕೆ ಕಾಂಗ್ರೆಸ್ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಾಕಷ್ಟು ಸ್ಥಾನಗಳನ್ನು ಗೆಲ್ಲದಿದ್ದರೆ ಗ್ಯಾರಂಟಿಗಳು ರದ್ದಾಗಲಿದೆಯೇ ಎನ್ನುವ ಅನುಮಾನಗಳು ಶುರುವಾಗಿದೆ.
ಇದೇವೇಳೆ ಮಾತನಾಡಿದ ಅವರು,ಬಡವರಿಗಾಗಿ ಸಿದ್ದರಾಮಯ್ಯನವರು ವರ್ಷಕ್ಕೆ 56 ಸಾವಿರ ಕೋಟಿ ಹಣ ಗ್ಯಾರಂಟಿಗಳಿಗೆ ಖರ್ಚು ಮಾಡುತ್ತಿದ್ದು ,ಜನ ನಮ್ಮ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಆಶೀರ್ವದಿಸಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದರು.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ