ಹೆಬ್ರಿ : ಈಗಿನ ಯಾಂತ್ರಿಕ ಜೀವನದಲ್ಲಿ ಜನರು ಒತ್ತಡದ ಜೀವನ ನಡೆಸುತ್ತಿದ್ದಾರೆ. ಈ ಒತ್ತಡದ ಜೀವನ ನಿರ್ವಹಣೆಗೆ ಯೋಗ ಅತ್ಯಂತ ಸಹಾಯಕವಾಗಲಿದೆ. ಯೋಗದಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯವಿದೆ. ಆದ್ದರಿಂದ ಎಲ್ಲರೂ ಯೋಗ , ಪ್ರಾಣಾಯಾಮ ಹಾಗೂ ಧ್ಯಾನ ಮಾಡಬೇಕು ಎಂದು ಯೋಗ ತರಬೇತಿದಾರ ಶ್ರೀನಿವಾಸ ಶೆಟ್ಟಿ ತಿಳಿಸಿದರು.
ಅವರು ಶಾಂತಿನಿಕೇತನ ಯುವ ವೃಂದ ಕುಡಿಬೈಲು ಕುಚ್ಚೂರು ಹಾಗೂ ನೆಹರು ಯುವ ಕೇಂದ್ರ ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಪ್ರತಿನಿತ್ಯ ಯೋಗ ಮಾಡುವುದರಿಂದ ನಮ್ಮ ಜೀವನದಲ್ಲಿ ಉತ್ತಮವಾದ ದೈಹಿಕ ಮತ್ತು ಮಾನಸಿಕ ಸಾಮಾರ್ಥ್ಯ ಹೊಂದಬಹುದು ಅಲ್ಲದೇ ಇದು ಒತ್ತಡವನ್ನು ಕಡಿಮೆ ಮಾಡಿ ನವಚೈತನ್ಯ ನೀಡುತ್ತದೆ ಎಂದರು.
ನಮ್ಮ ಸಂಘದ ಸಭಾಂಗಣದಲ್ಲಿ ಕಳೆದ ಮೂರು ವರ್ಷದಿಂದ ಸದಸ್ಯರು ನಿರಂತರವಾಗಿ ಯೋಗ ಅಭ್ಯಾಸ ಮಾಡುತ್ತಿದ್ದು ಇದು ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಸಕ್ರಿಯವಾಗಿ ಇರಲು ಸಹಕಾರಿಯಾಗುತ್ತದೆ ಎಂದು ಶಾಂತಿನಿಕೇತನ ಅಧ್ಯಕ್ಷ ದೀಕ್ಷಿತ್ ನಾಯಕ್ ತಿಳಿಸಿದರು.
ಸಂಸ್ಥಾಪಕ ರಾಜೇಶ್ ಕಾರ್ಯಕ್ರಮ ನಿರ್ವಹಿಸಿದರು. ಶಾಂತಿನಿಕೇತನ ವಿದ್ಯಾರ್ಥಿ ಘಟಕದ ವಿದ್ಯಾರ್ಥಿಗಳು ಸಂಘದ ಸದಸ್ಯರು ಉಪಸ್ಥಿತರಿದ್ದರು.