ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಬ್ರಿ ತಾಲೂಕಿನ ಅಡಾಲ್ ಬೆಟ್ಟು ಎಂಬಲ್ಲಿ ಶನಿವಾರ ನಡೆದಿದೆ.
ಹೆಬ್ರಿ ತಾಲೂಕಿನ ಅಡಾಲ್’ಬೆಟ್ಟು ನಿವಾಸಿ ಕುಮಾರ್(38) ಆತ್ಮಹತ್ಯೆ ಮಾಡಿಕೊಂಡ ಯುವಕ.ಕುಮಾರ್ ಈ ಹಿಂದೆ ವಿದ್ಯುತ್ ಕಂಬ ಅಳವಡಿಸುವ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕುತ್ತಿಗೆಗೆ ತಂತಿ ಬಿಗಿದು ಗಾಯವಾಗಿತ್ತು.ಆದರೆ ತದನಂತರ ಪದೇಪದೇ ಗಾಯ ಉಲ್ಬಣಗೊಂಡ ಸಾಕಷ್ಟು ಬಾರಿ ಚಿಕಿತ್ಸೆ ಪಡೆದರೂ ಗುಣಮುಖರಾಗದ ಹಿನ್ನೆಲೆಯಲ್ಲಿ ಜೀವನದಲ್ಲಿ ನೊಂದು ಈ ಕೃತ್ಯ ಎಸಗಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
