ಹೆಬ್ರಿ:ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9 ವಿದ್ಯಾರ್ಥಿಗಳು ಉಡುಪಿ ಜಿಲ್ಲಾ ಸಂಸ್ಕೃತ ಶಿಕ್ಷಕರ ಸಂಘದ ವತಿಯಿಂದ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ಪ್ರತಿಭಾ ಪುರಸ್ಕಾರ ಪಡೆದರು.
2022 – 23ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಸುಮಾರು 160ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಸಂಸ್ಕೃತ ಪ್ರಥಮ ಭಾಷೆಯಲ್ಲಿ ಪೂರ್ಣಾಂಕ ಪಡೆದವರಾಗಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಸದಸ್ಯರು,ವಿದ್ಯಾರ್ಥಿಗಳ ಪೋಷಕರು ಹಾಗೂ ಅಮೃತಭಾರತಿ ವಿದ್ಯಾಲಯದ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಉಪಸ್ಥಿತರಿದ್ದರು.