Share this news

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ವಿದ್ಯಾಲಯದಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಿಸಿ, ಎಳ್ಳು ಬೆಲ್ಲ ಹಂಚಲಾಯಿತು. ಈ ಸಂದರ್ಭದಲ್ಲಿ ಅಮೃತಭಾರತಿ ವಿದ್ಯಾಲಯದ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಮಾತನಾಡಿ ಮಕರಸಂಕ್ರಾಂತಿ ಹಬ್ಬವನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ. ಈ ಹಬ್ಬವು ಅಧ್ಯಾತ್ಮ ಮತ್ತು ಲೌಕಿಕ ದೃಷ್ಟಿಯಿಂದ ಮಹತ್ವವನ್ನು ಪಡೆದಿದೆ. ದ್ವಾಪರಯುಗದಲ್ಲಿ ಭೀಷ್ಮಾಚಾರ್ಯರು ದೇಹತ್ಯಾಗಕ್ಕಾಗಿ ಉತ್ತರಾಯಣ ಪುಣ್ಯಕಾಲವನ್ನು ಆಯ್ಕೆ ಮಾಡಿದ ಪವಿತ್ರ ದಿನವಾಗಿದೆ. ಅಂತೆಯೇ ಪ್ರಕೃತಿಯಲ್ಲಿ ಸೂರ್ಯನು ಉತ್ತರ ಪಥದತ್ತ ಸಾಗುವ ಪವಿತ್ರ ದಿನವಾಗಿದೆ. ಹೀಗೆ ಮನುಷ್ಯನ ದೇಹದಲ್ಲಿಯೂ ಬದಲಾವಣೆ ಆಗುವ ಸಮಯವಾಗಿದೆ. ಆದ್ದರಿಂದ ನಾವೆಲ್ಲರೂ ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡುತ್ತಾ ಜೀವನದಲ್ಲಿ ಯಶಸ್ಸು ಪಡೆಯುವ ದಿನವಾಗಿದೆ ಎಂದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಅಪರ್ಣಾ ಆಚಾರ್, ಶಕುಂತಲಾ ಹಾಗೂ ಸಂಸ್ಥೆಯ ವಿದ್ಯಾರ್ಥಿಗಳು ಗುರೂಜಿ ಮಾತಾಜಿ ಉಪಸ್ಥಿತರಿದ್ದರು.

 

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *