Share this news

ಕಾರ್ಕಳ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಮುದ್ದೂರು ಎಂಬಲ್ಲಿ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಮಾ.23ರಂದು ನಡೆದಿದೆ.

ಮುದ್ದೂರಿನ ರತ್ನಾ (58) ಮೃತಪಟ್ಟವರು. ಅವರು ಕಳೆದ 3 ವರ್ಷಗಳಿಂದ ಲೋ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದರು. ಎಂದಿನAತೆ ಮಾ.2ರಂದು ರಾತ್ರಿ 7 ಗಂಟೆಯ ವೇಳೆಗೆ ಸ್ನಾನ ಮಾಡಿ ಬರುತ್ತಿದ್ದಾಗ ಲೋ ಬಿಪಿ ಉಂಟಾಗಿ ಕುಸಿದು ಬಿದ್ದಿದ್ದರು. ಅದೇ ವೇಳೆ ಪಕ್ಕದಲ್ಲಿಯೇ ಇದ್ದ ಒಲೆಯಲ್ಲಿದ್ದ ಬೆಂಕಿ ತಗುಲಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಅವರು ಮೃತಪಟ್ಟಿದ್ದರು.

ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *