ಹೆಬ್ರಿ: ಮೂತ್ರಕೋಶಕ್ಕೆ ಸಂಬಂಧಿಸಿದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಬೆಳಗುಂಡಿ ಎಂಬಲ್ಲಿ ನಡೆದಿದೆ.
ಚಾರ ಗ್ರಾಮದ ಸುಮಿತ್ರಾ(69) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಅವರು ಕಳೆದ ಹಲವು ವರ್ಷಗಳಿಂದ ಮೂತ್ರಕೋಶದ ಕ್ಯಾನ್ಸರ್ ಇಂದ ಬಳಲುತ್ತಿದ್ದು ಸಾಕಷ್ಟು ಚಿಕಿತ್ಸೆ ಪಡೆದುಕೊಂಡರೂ ಕಾಯಿಲೆ ಗುಣವಾಗದ ಹಿನ್ನೆಲೆಯಲ್ಲಿ ಮನನೊಂದು ಹೆಬ್ರಿ ಸಮೀಪದ ಬೆಳಗುಂಡಿ ಜಡ್ಡು ಎಂಬಲ್ಲಿ ಬುಧವಾರ ಮುಂಜಾನೆ ಗೇರು ಮರದ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
