ಹೆಬ್ರಿ : ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜ.30 ರಂದು ನಡೆಯಲಿರುವ ಹೆಬ್ರಿ ತಾಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಪುಸ್ತಕ ಮಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ಸಮ್ಮೇಳನವನ್ನು ಸಚಿವ ವಿ. ಸುನಿಲ್ ಕುಮಾರ್ ಉದ್ಘಾಟಿಸಲಿದ್ದು, ಖ್ಯಾತ ಸಾಹಿತಿ ಮುನಿಯಾಲು ಗಣೇಶ್ ಶೆಣೈ ಅಧ್ಯಕ್ಷತೆ ವಹಿಸಲಿದ್ದಾರೆ.
ರಾಜ್ಯ ಹಾಗೂ ಜಿಲ್ಲೆಯ ಹಲವಾರು ಮೇರು ಸಾಹಿತಿಗಳು, ಕನ್ನಡಾಭಿಮಾನಿಗಳು, ಸಾರ್ವಜನಿಕರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು ಈ ಸಂದರ್ಭದಲ್ಲಿ ಪುಸ್ತಕ ಮಳಿಗೆ ತೆರೆಯಲು ಇಚ್ಚಿಸುವವರು ದೂರವಾಣಿ ಸಂಖ್ಯೆ 9449904727 , 9945501136 ಅಥವಾ 9448624143 ಗೆ ಸಂಪರ್ಕಿಸುವಂತೆ ಹೆಬ್ರಿ ತಾಲೂಕು ಕಸಾಪ ಪ್ರಕಟಣೆ ತಿಳಿಸಿದೆ.