ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ
ಹೆಬ್ರಿ: ಕ್ಷುಲ್ಲಕ ಕಾರಣಕ್ಕಾಗಿ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೆಬ್ರಿ ತಾಲೂಕಿನ ಗಿಲ್ಲಾಳಿ ಕುಡ್ತರಬೈಲು
ನಡೆದಿದೆ.
ಗಣೇಶ್ ದೇವಾಡಿಗ ಎಂಬವರ ಪುತ್ರ ಶಶಾಂಕ್ (16) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ತನ್ನ ದೊಡ್ಡಮ್ಮನ ಮನೆಯಾದ ಹೆಬ್ರಿ ಗಿಲ್ಲಾಳಿಯಲ್ಲಿ ಇದ್ದುಕೊಂಡು ಹೆಬ್ರಿ ಕಾಲೇಜ್ ನಲ್ಲಿ ಪ್ರಥಮ ವರ್ಷದ ಪಿಯುಸಿ ವಾಣಿಜ್ಯವಿಭಾಗದಲ್ಲಿ ವ್ಯಾಸಂಗ ಮಾಡಿಕೊಂಡಿದ್ದ.ಶಶಾಂಕ್
ಶನಿವಾರ ಕಾಲೇಜಿಗೆ ಹೋಗದೇ ಮನೆಯಲ್ಲಿ ಯಾರೂ ಇಲ್ಲದ ಸಮಯ ಯಾವುದೋ ವಿಚಾರದಲ್ಲಿ ಮನನೊಂದು ಮಾನಸಿಕ ಖಿನ್ನತೆಯಿಂದ ತಾನು ಮಲಗುವ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ಧಾನೆ.
ಈತ ಕಳೆದ ಕೆಲದಿನಗಳಿಂದ ಯಾರಲ್ಲಿಯೂ ಹೇಳಿ ಕೊಳ್ಳಲಾಗದ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಈತನ ಸಾವಿನ ಹಿಂದೆ ಪ್ರೀತಿ ಪ್ರೇಮ ಅಥವಾ ಇತರ ಕಾರಣಗಳು ಇರಬಹುದೇ ಎನ್ನುವ ವಿಚಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ