ಹೆಬ್ರಿ: ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಕಾಂಗ್ರೆಸ್ ಮುಖಂಡರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ನೀರೆ ಕೃಷ್ಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುದ್ರಾಡಿ ಮಂಜುನಾಥ್ ಪೂಜಾರಿ, ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ನವೀನ್ ಅಡ್ಯಂತಾಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಬಾಯರಿ, ಚಾರ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಶೆಟ್ಟಿ, ಕಾಂಗ್ರೆಸ್ ಕಾರ್ಯದರ್ಶಿ ಎಚ್ ಜನಾರ್ಧನ್ ಮುಂತಾದವರು ಉಪಸ್ಥಿತರಿದ್ದರು