Share this news

ಹೆಬ್ರಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಣ್ಣೀರು ಎಂಬಲ್ಲಿ ಸೋಮವಾರ ಸಂಭವಿಸಿದೆ.

ನಾಡ್ಪಾಲು ನಿವಾಸಿ ವಿಜೇಂದ್ರ ಆಚಾರ್ಯ(30) ಎಂಬವರು ಆತ್ಮಹತ್ಯೆ ಮಾಡಿಕೊಂಡ ಯುವಕ. ವಿಜೇಂದ್ರ ಆಚಾರ್ಯ ಕಳೆದ ಹಲವು ಸಮಯದಿಂದ ಯಾರಲ್ಲಿಯೂ ಹೇಳಿಕೊಳ್ಳಲಾಗದೇ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇದೇ ಹಿನ್ನಲೆಯಲ್ಲಿ ಮನನೊಂದು ಸೋಮವಾರ ರಾತ್ರಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

 

 

 

 

 

 

 

 

Leave a Reply

Your email address will not be published. Required fields are marked *