ಹೆಬ್ರಿ:ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ಶಾಲಾ ಶಿಕ್ಷಣ ಇಲಾಖೆ ಜಂಟಿ ಆಶ್ರಯದಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮೈಸೂರು ವಿಭಾಗ ಮಟ್ಟದ 8 ಜಿಲ್ಲೆಯ ಯೋಗಾಸನ ಸ್ಪರ್ಧೆಯ ಸಮಾರೋಪ ಸಮಾರಂಭ ಸೋಮವಾರ ಸಂಪನ್ನಗೊಂಡಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮೃತ ಭಾರತಿ ಟ್ರಸ್ಟ್ ನ ಕಾರ್ಯದರ್ಶಿ ಗುರುದಾಸ್ ಶೆಣೈ ವಹಿಸಿ ಮಾತನಾಡಿ, ಯೋಗದಿಂದ ಭಾರತ ದೇಶವು ಜಗತ್ತಿನಲ್ಲೇ ಮಹತ್ವದ ಸ್ಥಾನ ಪಡೆದಿದೆ. ಮಾನಸಿಕ – ದೈಹಿಕವಾಗಿ ಬೆಳೆಯುವ ಮೂಲಕ ಜೀವನದಲ್ಲಿ ಸಾಧನೆ ಮಾಡಲು ಸಹಕಾರಿಯಾಗಿದೆ. ನಾವು ಉತ್ತಮ ಸಂಸ್ಕಾರ ಹೊಂದಿ, ದೇಶದ ಸೇವೆಯೊಂದಿಗೆ ಸಮಾಜದ ಸ್ವಾಸ್ಥ್ಯಕ್ಕೆ ಕಾರಣೇಕರ್ತರಾಗೋಣ ಎಂದು ಯೋಗಪಟುಗಳಿಗೆ ಶುಭಕಾಮನೆಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಅಮೃತಭಾರತಿ ವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ, ಸೀತಾನದಿ ವಿಠಲ ಶೆಟ್ಟಿ, ಭಾಸ್ಕರ್ ಜೋಯಿಸ್, ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿಯ ಜಾಹ್ನವಿ , ಕೋಮಲ್ ಫೀಡ್ಸ್ ಮಾಲಕ ಸಿದ್ಧಿಪ್ರಸಾದ್ ಎಂ ಶೆಣೈ, ಹೆಬ್ರಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಧಾಕರ ಹೆಗ್ಡೆ, ಗ್ರಾಮ ಪಂಚಾಯತ್ ಸದಸ್ಯ ಗಣೇಶ ಕುಮಾರ್ , ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ರವಿಚಂದ್ರ ಕಾರಂತ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪಾಂಡುರಂಗ ಆಚಾರ್ಯ, ನೌಕರರ ಸಂಘದ ಅಧ್ಯಕ್ಷ ಹರೀಶ್ ಪೂಜಾರಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಪ್ರಾಥಮಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ, ಅಂತಾರಾಷ್ಟ್ರೀಯ ಯೋಗ ತೀರ್ಪುಗಾರ ನರೇಂದ್ರ ಕಾಮತ್, ಸಂಸ್ಥೆಯ ಮುಖ್ಯಸ್ಥರು, ಬೋಧಕವರ್ಗ , ಪೋಷಕರು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಮಗ್ರ ಪ್ರಶಸ್ತಿ ದಕ್ಷಿಣ ಕನ್ನಡ ಜಿಲ್ಲೆ ಪಡೆದುಕೊಂಡಿದೆ.
ಈ ಕಾರ್ಯಕ್ರಮವನ್ನು ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್ ಹೆಗ್ಡೆ ಸ್ವಾಗತಿಸಿ, ನಟರಾಜ್ ಬಹುಮಾನ ಪಟ್ಟಿ ವಾಚಿಸಿದರು. ವಿಜಯಕುಮಾರ್ ಶೆಟ್ಟಿ ನಿರೂಪಿಸಿ, ನಿಶಾನ್ ಶೆಟ್ಟಿ ವಂದಿಸಿದರು.












