ಹೆಬ್ರಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ವೇಗವಾಗಿ ಬಂದ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಹೆಬ್ರಿ ತಾಲೂಕಿನ ಕನ್ಯಾನ ಶಾಲೆಯ ಬಳಿ ಡಿ.31 ರ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಜಯಂತ ಬೋರೋ(25) ಎಂಬವರು ಮೃತಪಟ್ಟ ದುರ್ದೈವಿ.
ಸೊರಬ ತಾಲೂಕಿನ ಹುರುಳಿಕೊಪ್ಪ ನಿವಾಸಿಗಳಾದ ಅಜಯ್, ಜಯಂತ ಹಾಗೂ ಇನ್ನೋರ್ವ ವ್ಯಕ್ತಿ ಕನ್ಯಾನ ಪೇಟೆಯಿಂದ ರಸ್ತೆಯ ಎಡಭಾಗದಲ್ಲಿ ಕೋಮಲ್ ಫೀಡ್ಸ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಹೆಬ್ರಿ ಕಡೆಯಿಂದ ಚಾಲಕ ಇರ್ಫಾನ್ ಖಾದರ್ ಎಂಬಾತ ತನ್ನ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ನಡೆದುಕೊಂಡು ಹೋಗುತ್ತಿದ್ದವರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ಜಯಂತ ಬೋರೋ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಿ ಇನ್ನಿಬ್ಬರು ಕೂದಲೆಳೆ ಹಂತದಲ್ಲಿ ಪಾರಾಗಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ