ಹೆಬ್ರಿ : ಹೆಬ್ರಿ ತಾಲೂಕಿನ ಚಾರಾ ಗ್ರಾಮದ ಚಾರಹಸಿಕೋಡ್ಲು ಎಂಬಲ್ಲಿ ವೃದ್ಧರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಡಿಯ ಮರಕಾಲ (82ವ) ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ ನೆನಪಿನ ಶಕ್ತಿ ಕಡಿಮೆ ಇದ್ದು ಅದೇ ಕಾರಣಕ್ಕೆ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ಜುಲೈ 31 ರಂದು ರಾತ್ರಿ ಮನೆಯ ಸಮೀಪದ ಆವರಣವಿಲ್ಲದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ