ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಸತಿನಿಲಯದ ವಿದ್ಯಾರ್ಥಿಗಳ ದ್ವಿತೀಯ ಪೋಷಕರ ಸಭೆ ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಅಮೃತಭಾರತಿ ಟ್ರಸ್ಟ್ ನ ಅಧ್ಯಕ್ಷರಾದ ಸಿ.ಎ.ರವಿರಾವ್ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯಲ್ಲೂ ವಿಶೇಷತೆ ಇರುತ್ತದೆ. ಅದನ್ನು ಗುರುತಿಸುವ ಕೆಲಸ ನಮ್ಮದಾಗಬೇಕು. ನಮ್ಮ ಸಂಸ್ಥೆಯ ವಸತಿ ನಿಲಯದ ವಿದ್ಯಾರ್ಥಿಗಳು ಹೆತ್ತವರಿಗೆ ಕೀರ್ತಿ ತರುವ ಕೆಲಸ ಮಾಡಲಿ ಎಂದು ಆಶಿಸಿದರು.

ವಸತಿನಿಲಯ ಸಮಿತಿಯ ಸದಸ್ಯ ರಾಮಕೃಷ್ಣ ಆಚಾರ್ಯ ಮಾತನಾಡಿ, ವಿದ್ಯಾರ್ಥಿಗಳು ದೇಶದ ಅತ್ಯುತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕಾದರೆ ಉತ್ತಮ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಅಪರ್ಣಾ ಆಚಾರ್ ಹಾಗೂ ಶಕುಂತಲಾ, ಸಂಸ್ಥೆಯ ಮೇಲ್ವಿಚಾರಕ ರಾಘವೇಂದ್ರ, ವಸತಿ ನಿಲಯದ ಮುಖ್ಯಸ್ಥರಾದ ಶಂಕರ್ ಸಿಂಗ್, ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ಉಪಸ್ಥಿತರಿದ್ದರು. ವಸತಿ ನಿಲಯದ ವಿದ್ಯಾರ್ಥಿಗಳ ಸಾಧಕ ಪೋಷಕರಾದ ಶ್ರೀಮತಿ ಕಲ್ಪನಾ ಅಡಿಗರನ್ನು ಗೌರವಿಸಲಾಯಿತು. ವಿದ್ಯಾರ್ಥಿಗಳಿಗೆ ವಿಶೇಷ ಬಹುಮಾನ ವಿತರಿಸಲಾಯಿತು. ರಕ್ಷಾ ಮಾತಾಜಿ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಅಪರ್ಣಾ ಆಚಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ಆಮಿಷಾ ಶಹನಾಯಿ ನುಡಿಸಿ, ಭೂಮಿಕಾ, ಸುಮಿತಾ ಪ್ರಾರ್ಥಿಸಿದರು. ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಸ್ವಾಗತಿಸಿ ನಿರೂಪಿಸಿದರು.







