ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಡೆದಿದೆ.
ಯಡಿಯೂರಪ್ಪ ಅವರಿದ್ದ ಹೆಲಿಕಾಪ್ಟರ್ ಹೆಲಿಪ್ಯಾಡ್ ಮೈದಾನದಲ್ಲಿ ಲ್ಯಾಂಡಿಂಗ್ ವೇಳೆಯಲ್ಲಿ ಪ್ಲಾಸ್ಟಿಕ್ ಹಾಳೆಗಳು ಮತ್ತು ತ್ಯಾಜ್ಯದಿಂದ ತುಂಬಿದ ಚೀಲಗಳು ಹೆಲಿಕಾಪ್ಟರ್ ಲ್ಯಾಂಡ್ ಆಗುವಾಗ ತೂರಿ ಬಂದ ಸಲುವಾಗಿ, ಲ್ಯಾಂಡಿಂಗ್ ಮಾಡಲು ಕಷ್ಟಪಡಬೇಕಾದ ಸನ್ನಿವೇಶ ಕಂಡು ಬಂದಿದೆ.
ತಕ್ಷಣ ಎಚ್ಚೆತ್ತ ಪೈಲೆಟ್ ಹೆಲಿಕಾಪ್ಟರ್‌ನ್ನು ಲ್ಯಾಂಡ್ ಮಾಡದೆ ಬೇರೆಡೆ ತೆಗೆದುಕೊಂಡು ಆಕಾಶದಲ್ಲಿ ಹಾರಾಟ ಮಾಡಿ ಬಾರಿ ಅನಾಹುತ ತಪ್ಪಿದ್ದು, ಸ್ಥಳದಲ್ಲಿ ಕ್ಷಣಕಾಲ ಆತಂಕ ಸೃಷ್ಟಿಯಾಗಿತ್ತು. ಬಳಿಕ ಪೊಲೀಸರು ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದಾಗ ಪೈಲೆಟ್ ಲ್ಯಾಂಡ್ ಮಾಡಿದ್ದಾರೆ.