ಮೈಸೂರು : ನಿಗಮ ಮಂಡಳಿಗಳಿಗೆ ನೇಮಕಾತಿ ಪ್ರಕ್ರಿಯೆ ಸದ್ಯ ಕಾಂಗ್ರೆಸ್ ಪಾಲಿಗೆ ಗಜಪ್ರಸವದಂತಾಗಿದ್ದು, ಇದು ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ.ಈ ನಡುವೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದು ,ಹೈಕಮಾಂಡ್ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದು ಇದರಿಂದ ಆಕಾಂಕ್ಷಿಗಳ ಎದೆ ಬಡಿತ ಹೆಚ್ಚಾಗಿದೆ
ನಿಗಮ ಮಂಡಳಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯ ಕಾಂಗ್ರೆಸ್ ನಲ್ಲಿ ಗೊಂದಲ ನಿವಾರಣೆ ಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಈ ವಿಚಾರವಾಗಿ ಸಿಎಂ ಹಾಗೂ ಡಿಸಿಎಂ ನಡುವೆ ಜಟಾಪಟಿ ಏರ್ಪಟ್ಟಿದ್ದು, ಕಾಂಗ್ರೆಸ್ ಹೈಕಮಾಂಡ್ ನಿಗಮ ಮಂಡಳಿ ಪಟ್ಟಿಯನ್ನು ಬಿಡುಗಡೆ ಮಾಡುವುದಕ್ಕೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ತಿಳಿಬಂದಿದೆ.
ಹೈಕಮಾಂಡ್ ಅವರ ಈ ಒಂದು ನಡೆಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಇಡೀ ಸಿಎಂ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.ಹೈಕಮಾಂಡ್ ಒಪ್ಪಿಗೆ ನೀಡಿದ ಕೂಡಲೇ ನಿಗಮ ಮಂಡಳಿ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ನಿಗಮ ಮಂಡಳಿ ಅಧ್ಯಕ್ಷ ಉಪಾಧ್ಯಕ್ಷ ಪಟ್ಟಿ ವರಿಷ್ಠರಿಗೆ ಕಳುಹಿಸಿದ್ದೇವೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದ ಕೂಡಲೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ