Share this news

ಧಾರವಾಡ : ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆಗೆ ಎರಡು ದಿನ ಬಾಕಿ ಇರುವಾಗ ಬಿಜೆಪಿ ಹೈಕಮಾಂಡ್‌ ನಾಯಕರು ಕರೆ ಮಾಡಿ ಈ ಬಾರಿ ನೀವು ಸ್ಪರ್ಧೆ ಮಾಡುವುದು ಬೇಡ, ಮತ್ತೊಬ್ಬರಿಗೆ ಟಿಕೆಟ್‌ ಕೊಡಲು ಅವಕಾಶ ಮಾಡಿಕೊಡಿ ಎಂದು ಕೇಳಿದ್ದಾರೆ. ಇದಕ್ಕೆ ನಾನು ಸಮ್ಮತಿಸದೇ ಇನ್ನೊಂದು ಬಾರಿ ಚರ್ಚೆ ಮಾಡಿ ಟಿಕೆಟ್‌ ಕೊಡಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವರಿಷ್ಠರ ಕಡೆಯಿಂದ ನನಗೆ ಮಾಹಿತಿ ಬಂತು. ನೀವು ಹಿರಿಯರಿದ್ದೀರಿ ಯುವಜನರಿಗೆ ಅವಕಾಶ ಮಾಡಿಕೊಡಿ ಎಂದು ಹೇಳಿದರು. ರಾಜ್ಯದಲ್ಲಿ 30 ವರ್ಷದಿಂದ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಸೇವೆಯನ್ನು ಮಾಡಿದ್ದೇನೆ. ಉತ್ತರ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ನಾನು ಶ್ರಮಿಸಿದ್ದೇನೆ. ಈಶ್ವರಪ್ಪ, ಯಡಿಯೂರಪ್ಪ, ಅನಂತಕುಮಾರ್‌ ಅವರೊಂದಿಗೆ ಕೆಲಸ ಮಾಡಿದ್ದೇನೆ.

ನಾನು 6 ಬಾರಿ ಆರಿಸಿ ಬಂದಿದ್ದೇನೆ. ಪ್ರತಿಬಾರಿ 25 ಸಾವಿರಕ್ಕೂ ಅಧಿಕ ಮತಗಳಿಂದ ನಾನು ಗೆದ್ದು ಬಂದಿದ್ದೇನೆ. ಆದರೆ, ನಾನು ಯಾಕೆ ಸ್ಪರ್ಧೆ ಮಾಡಬಾರದು ಎಂದು ಪ್ರಶ್ನೆ ಮಾಡಿದ್ದೇನೆ. ಇನ್ನು ಹುಬ್ಬಳ್ಳಿ ಕೇಂದ್ರ ಭಾಗದಲ್ಲಿ ಸಮೀಕ್ಷೆ ಮಾಡಿದಾಗ ಗೆಲ್ಲುವಂತಹ ವ್ಯಕ್ತಿ ಎಂದು ವರದಿ ಬಂದಿದೆ ಎಂದರು.

Leave a Reply

Your email address will not be published. Required fields are marked *