Share this news

ಚಿತ್ರದುರ್ಗ : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮುಂದಿನ ದಿನಗಳಲ್ಲಿ ಮದ್ಯದ ಅಂಗಡಿ ತೆರೆಯುವ ವಿಷಯದ ಕುರಿತಾಗಿ ಇಂದು ಚಿತ್ರದುರ್ಗದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಸರ್ಕಾರ ಯಾವುದೇ ಹೊಸದಾಗಿ ಮಧ್ಯದ ಅಂಗಡಿ ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಗ್ರಾಮ ಪಂಚಾಯಿತಿಗಳಲ್ಲಿ ಮಧ್ಯದ ಅಂಗಡಿ ತೆರೆಯಬಹುದ ಚಿಂತನೆಯನ್ನು ಸಚಿವರು ಹೇಳಿದ್ದಾರೆ ಹೊರತು ಯಾವುದೇ ಕಾರಣಕ್ಕೂ ಹೊಸದಾಗಿ ಮದ್ಯದ ಅಂಗಡಿ ತೆರೆಯುವುದಿಲ್ಲ. ಬಿಜೆಪಿ ಅವಧಿಯಲ್ಲಿ ರಾಜ್ಯದ ಆರ್ಥಿಕ ಮಟ್ಟ ಸಂಪೂರ್ಣವಾಗಿ ಕುಸಿದಿತ್ತು. ಆದರೆ ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ ಕೈಗೊಂಡಿಲ್ಲ. ಗ್ಯಾರಂಟಿ ಯೋಜನೆಗಳಿಂದ ಆರ್ಥಿಕಮಟ್ಟ ಸುಧಾರಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ ಎಂದು ತಿಳಿಸಿದರು.

ಕಳೆದ ಕೆಲವು ದಿನಗಳ ಹಿಂದೆ ಸಚಿವರೊಬ್ಬರು ಗ್ರಾಮ ಪಂಚಾಯಿತಿಗಳಲ್ಲಿ ಮದ್ಯದ ಅಂಗಡಿ ತೆರೆಯುವುದಾಗಿ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದರು. ಇದಕ್ಕೆ ರಾಜ್ಯದಲ್ಲಿ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಈ ಚಿಂತನೆಯನ್ನ ಕೈ ಬಿಟ್ಟಿದೆ ಎನ್ನಲಾಗಿದೆ

 

 

 

 

 

 

 

Leave a Reply

Your email address will not be published. Required fields are marked *