ಬೆಂಗಳೂರು : ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಮರುಮೌಲ್ಯಮಾಪನದ ನಂತರ ಫಲಿತಾಂಶದಲ್ಲಿ 1 ಅಂಕ ವ್ಯತ್ಯಾಸವಿದ್ದರೂ ಅದನ್ನು ಪರಿಗಣಿಸಲಾಗುವುದು ಎಂದು ಶಿಕ್ಷಣ ಸಚಿವರಾದ ಬಿ. ಸಿ ನಾಗೇಶ್ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊAಡಿದ್ದಾರೆ.
ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಒಂದು ಅಂಕ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2023ರ ಮಾರ್ಚ್ನಲ್ಲಿ ನಡೆಯುವ ವಾರ್ಷಿಕ ಪರೀಕ್ಷೆಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ ಎಂದು ಬಿ. ಸಿ ನಾಗೇಶ್ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಅಂಕವನ್ನೂ ಪರಿಗಣಿಸುವ ವಿದ್ಯಾರ್ಥಿ ಸ್ನೇಹಿ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಈ ಸಂಬAಧ ಶೀಘ್ರದಲ್ಲೇ ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು-1997ಕ್ಕೆ ತಿದ್ದುಪಡಿ ತರಲಾಗುತ್ತದೆ.
ಈ ಹಿಂದೆ ಮರುಮೌಲ್ಯಮಾಪನದ ನಂತರ ಸುಮಾರು 6 ಅಂಕಗಳು ವ್ಯತ್ಯಾಸವಾಗಿದ್ದರೆ ಮಾತ್ರ ಅದನ್ನು ಪರಿಗಣಿಸಲಾಗುತ್ತಿತ್ತು. ಇದರಿಂದ ಅದೆಷ್ಟೋ ವಿದ್ಯಾರ್ಥಿಗಳು ಒಂದೆರಡು ಅಂಕಗಳ ವ್ಯತ್ಯಾಸದಿಂದ ಡಿಸ್ಟಿಂಕ್ಷನ್ (85% ಗಿಂತ ಮೇಲೆ) ಕಳೆದುಗೊಂಡಿದ್ದರು. ಆದರೆ ಈ ವರ್ಷದಿಂದ ಪಿಯು ವಿದ್ಯಾರ್ಥಿಗಳು 1 ಅಂಕ ಪಡೆಯಬೇಕಾದರೂ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಅವಕಾಶವಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.