
ಕಾರ್ಕಳ,ಮಾ25: ಕಾರ್ಕಳದಲ್ಲಿ 2027 ರಲ್ಲಿ ನಡೆಯಲಿರುವ ಐತಿಹಾಸಿಕ ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ 1.59 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆಗೊಳಿಸಿದ್ದು ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆಬ್ರವರಿ 25 ರಂದು ಕಾರ್ಕಳಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮಹಾಮಸ್ತಕಾಭಿಷೇಕದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಂತೆ ಉದಯ ಶೆಟ್ಟಿ ಮುನಿಯಾಲು ಅವರು ಮಾಜಿ ಮುಖ್ಯಮಂತ್ರಿ ಡಾ. ಎಮ್. ವೀರಪ್ಪ ಮೊಯಿಲಿ ಅವರ ಮೂಲಕ ಸಿಎಂಗೆ ಮನವಿ ಸಲ್ಲಿಸಿದ್ದು, ಮನವಿಗೆ ಸ್ಪಂದಿಸಿದ್ದ ಸಿದ್ದರಾಮಯ್ಯ ಅನುದಾನ ನೀಡುವ ಭರವಸೆಯನ್ನು ನೀಡಿದ್ದರು. ಅದರಂತೆ ಕೇವಲ ಒಂದು ತಿಂಗಳಿನಲ್ಲಿ ಅಲ್ಪ ಸಂಖ್ಯಾತ ಇಲಾಖೆಯ ಮೂಲಕ 1.59 ಕೋಟಿ ರೂ.ಗಳ ಅನುದಾನವನ್ನು ಮೊದಲ ಹಂತದಲ್ಲಿ ಬಿಡುಗಡೆಗೊಳಿಸಿದ್ದಾರೆ.
ಕೊಟ್ಟ ಮಾತಿನಂತೆ ಅನುದಾನವನ್ನು ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕಾರ್ಕಳ ಜನತೆಯ ಪರವಾಗಿ ಧನ್ಯವಾದ ಸಲ್ಲಿಸಿರುವುದಾಗಿ ಉದಯ ಕುಮಾರ್ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.















.
.
.
.
.
.
.
.
.
.
