Share this news

 

 

ನವದೆಹಲಿ (ಆ.7): ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಭಾರತದ ಹಲವು ರಾಜ್ಯಗಳ ಲೋಕಸಭಾ  ಮತ್ತು ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ನಡೆದಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದರು. ಅದನ್ನು ಬಿಜೆಪಿ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗ (ECI) ತಳ್ಳಿಹಾಕಿತ್ತು. ಇದೀಗ ಸಾಕ್ಷಿ ಸಮೇತ ತಮ್ಮ ಆರೋಪವನ್ನು ಪುನರುಚ್ಛರಿಸಿರುವ ರಾಹುಲ್ ಗಾಂಧಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದ ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಯಾವ ರೀತಿಯಲ್ಲಿ ಮತ್ತು ಎಷ್ಟು ಪ್ರಮಾಣದಲ್ಲಿ ನಕಲಿ ಮತದಾನ ನಡೆದಿದೆ ಎಂಬುದರ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಮತದಾರರ ಪಟ್ಟಿ ಪರಿಶೀಲನೆಯಲ್ಲಿನ ಅಕ್ರಮಗಳ ಕುರಿತು ಮಾಧ್ಯಮಗಳಿಗೆ ಪಿಪಿಟಿ ಪ್ರೆಸೆಂಟೇಷನ್‌ ನೀಡಿದರು. ಪರದೆಯ ಮೇಲೆ ಕರ್ನಾಟಕದ ಮತದಾರರ ಪಟ್ಟಿಯನ್ನು ತೋರಿಸುತ್ತಾ, ಎರಡೂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಅನುಮಾನಾಸ್ಪದ ಮತದಾರರಿದ್ದಾರೆ ಎಂದು ರಾಹುಲ್ ಹೇಳಿದರು. ಮಹಾರಾಷ್ಟ್ರದ ಫಲಿತಾಂಶಗಳನ್ನು ನೋಡಿದ ನಂತರ, ಚುನಾವಣೆ ಕಳ್ಳತನ ಆಗಿರುವ ನಮ್ಮ ಅನುಮಾನ ಎಂದು ದೃಢಪಟ್ಟಿದೆ ಎಂದು ಅವರು ಹೇಳಿದರು. ಮತಯಂತ್ರ ಓದಬಹುದಾದ ಮತದಾರರ ಪಟ್ಟಿಯನ್ನು ಒದಗಿಸದ ಮೂಲಕ, ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಸೇರಿ ಮಹಾರಾಷ್ಟ್ರ ಚುನಾವಣೆಯನ್ನು ಕದ್ದಿದೆ ಎಂದು ನಮಗೆ ಮನವರಿಕೆಯಾಗಿದೆ ಎಂದು ಆರೋಪಿಸಿದ್ದಾರೆ.

ಮಹದೇವಪುರದಲ್ಲಿ ನಕಲಿ ವಿಳಾಸಗಳನ್ನು ಹೊಂದಿರುವ ‘40,009’ ಮತದಾರರಿದ್ದಾರೆ. ‘ಮನೆ ಸಂಖ್ಯೆ 0’ ಎಂಬ ಅಡ್ರೆಸ್ ಇರುವ ಹಲವರು ನೋಂದಾಯಿಸಿಕೊಂಡಿದ್ದಾರೆ. ಒಂದು ಪ್ರಕರಣದಲ್ಲಿ, 46 ಮತದಾರರು ಒಂದೇ ರೂಮಿನ ವಿಳಾಸದ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ. ಆದರೆ ಆ ಸ್ಥಳಕ್ಕೆ ಭೇಟಿ ನೀಡಿದಾಗ, ಯಾರೂ ಅಲ್ಲಿ ವಾಸಿಸುತ್ತಿಲ್ಲ ಎಂದು ಗೊತ್ತಾಯಿತು ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನಕಲಿ ವಿಳಾಸಗಳೊಂದಿಗೆ 40,000 ನಮೂದುಗಳು ಮತ್ತು ಯಾವುದೇ ಫೋಟೋಗಳಿಲ್ಲದ ಸುಮಾರು 4,000 ನೋಂದಾಯಿತ ಮತದಾರರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮತಗಳ್ಳತನಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಚುನಾವಣೆ ಸೇರಿ ಹಲವು ವಿಚಾರಗಳ ಪ್ರಸ್ತಾಪ ಮಾಡಿದ್ದಾರೆ. ಮಹಾರಾಷ್ಟ್ರ ಐದು ತಿಂಗಳಲ್ಲಿ ಅತಿ ಹೆಚ್ಚು ಮತದಾರರು ಸೇರ್ಪಡೆಯಾಗಿದ್ದಾರೆ. ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ. ಸಂಜೆ ಐದು ಗಂಟೆಯ ಬಳಿಕ ಅತಿ ಹೆಚ್ಚು ಮತದಾನವಾಗಿದೆ. ನಾವು ಚುನಾವಣಾ ಆಯೋಗ ಸಂಪರ್ಕಿಸಿದರೆ ಯಾವುದೇ ಪ್ರತಿಕ್ರಿಯೆ ಇಲ್ಲ. ಆಯೋಗ ನಮಗೆ ಮತದಾರರ ಪಟ್ಟಿ ನೀಡಲು ನಿರಾಕರಿಸಿತು. ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿ ನೀಡಲಿಲ್ಲ. ಸಂಜೆ ಐದೂವರೆ ಬಳಿಕ ಹೆಚ್ಚು ಮತದಾನವಾಗಿದೆ. ಸಿಸಿಟಿವಿ ದೃಶ್ಯಗಳನ್ನು ಡಿಲಿಟ್ ಮಾಡಲಾಯಿತು ಎಂದು ರಾಹುಲ್ ಆರೋಪಿಸಿದ್ದಾರೆ.

ಮತಗಳ್ಳತನ ಆರೋಪ ಮಾಡಿದ್ದುಸಂಬಂಧ ನಾಳೆ(ಆಗಸ್ಟ್ 08) ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಲಾಗಿರುವ ಬೃಹತ್ ಪ್ರತಿಭಟನಾ ಆಂದೋಲನದಲ್ಲಿ ಪಾಲ್ಗೊಳ್ಳಲಿದ್ದಾರೆ ಪ್ರತಿಭಟನಾ ರ್ಯಾಲಿಯಲ್ಲಿ ಸಿಎಂ ಸಿದ್ದರಾಮಯ್ಯಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಹಾಗೂ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *