ಬೆಂಗಳೂರು: ರಾಜ್ಯದಲ್ಲಿ ಬಾಕಿ ಇರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಸಂಬAಧ ಕ್ಷೇತ್ರ ಪುನರ್ ವಿಂಗಡಣನೆಯ ಅಧಿಸೂಚನೆಯನ್ನು 10 ದಿನಗಳಲ್ಲಿ ಹೊರಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ಇಂದು ರಾಜ್ಯ ಚುನಾವಣಾ ಆಯೋಗ ಜಿಲ್ಲಾ, ತಾಲೂಕು ಪಂಚಾಯತ್ ಕ್ಷೇತ್ರ ವಿಂಗಡಣೆ ಕುರಿತು ಸಲ್ಲಿಸಿದ್ದ ಪಿಐಎಲ್ ಅರ್ಜಿಯ ವಿಚಾರಣೆ ನಡೆಸಿದ ವೇಳೆ ಹೈಕೋರ್ಟ್ ನ್ಯಾಯಪೀಠಕ್ಕೆ ಸರ್ಕಾರದ ಪರವಾಗಿ ಎಜಿ ಪ್ರಭುಲಿಂಗ್ ನಾವದಗಿ ಅವರು 10 ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಹೊರಡಿಸಲಾಗುವುದು ಎಂದರು ಮಾಹಿತಿ ನೀಡಿದರು.
ರಾಜ್ಯ ಸರ್ಕಾರಕ್ಕೆ ಜನವರಿ 30ರಂದು ಕ್ಷೇತ್ರ ಪುನರ್ ವಿಂಗಡಣೆ ಕುರಿತಾದ ಸಮಿತಿಯ ವರದಿಯನ್ನು ನೀಡಲಾಗಿದೆ. ಸಾರ್ವಜನಿಕರ ಆಕ್ಷೇಪಣೆಗಳನ್ನು ಪರಿಗಣಿಸುವಂತೆ ಮಾಹಿತಿ ನೀಡಿದೆ ಎಂದರು.
ಈ ಮಾಹಿತಿಯನ್ನು ಪಡೆದ ಹೈಕೋರ್ಟ್ ನ್ಯಾಯಪೀಠವು ಜಿಲ್ಲಾ, ತಾಲೂಕು ಪಂಚಾಯತ್ ಸಂಬAಧ ನೀಡಿದಂತ ಹೇಳಿಕೆ ದಾಖಲಿಸಿಕೊಂಡು, 2 ವಾರ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ