
ಬೆಳಗಾವಿ,ಡಿ.10: 2024- 25 ನೇ ಸಾಲಿನಲ್ಲಿ ರಾಜ್ಯದಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆಗಳು ಸೇತುವೆ ಮತ್ತು ಚರಂಡಿ ಕಾಮಗಾರಿಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಕಳೆದ ಬೆಳಗಾವಿ ಅಧಿವೇಶನದಲ್ಲಿ ಸಂದರ್ಭದಲ್ಲಿ ರಾಜ್ಯದ ಗ್ರಾಮೀಣ ಭಾಗದ ಎಲ್ಲಾ ಶಾಸಕರಿಗೆ ತಲಾ 10 ಕೋಟಿ ಅನುದಾನ ನೀಡುವುದಾಗಿ ಘೋಷಣೆ ಮಾಡಿತ್ತು. ಅದರಂತೆ ದಿನಾಂಕ 17.01.2025 ರಂದು ಸರಕಾರದ ಅಧಿಕೃತ ಆದೇಶ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ತಲಾ 10 ಕೋಟಿ ಅನುದಾನಕ್ಕಾಗಿ ಕ್ರಿಯಾಯೋಜನೆ ಸಲ್ಲಿಸುವಂತೆ ತಿಳಿಸಲಾಗಿತ್ತು, ರಾಜ್ಯದ ಶಾಸಕರು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ರಸ್ತೆಗಳು ಹಾಗೂ ಸೇತುವೆಗಳ ಸುಧಾರಣೆಗಾಗಿ ಪ್ರಸ್ತಾವನೆಯನ್ನು ಸಲ್ಲಿಸಿದ್ದರು.
ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯ ಗ್ರಾಮಾಂತರ ಪ್ರದೇಶದ ಸುಮಾರು 56 ಗ್ರಾಮೀಣ ರಸ್ತೆಗಳ ಸುಧಾರಣೆಗೆ ದಿನಾಂಕ 21.05.2025 ರಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿಗಳ ಮುಖಾಂತರ ಕ್ರಿಯಾ ಯೋಜನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು. ಕ್ರಿಯಾಯೋಜನೆಗೆ ಸರಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದರೂ ಈವರೆಗೆ ಯಾವುದೇ ಅನುದಾನ ಬಿಡುಗಡೆ ಮಾಡದಿರುವುದರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಈವರೆಗೆ ಆಗಿರುವುದಿಲ್ಲ ಎಂದು ಸದನದಲ್ಲಿ ಶಾಸಕ ವಿ ಸುನಿಲ್ ಕುಮಾರ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಕಳೆದ 2 ವರ್ಷಗಳಲ್ಲಿ ಯಾವುದೇ ಅನುದಾನ ಬಿಡುಗಡೆ ಮಾಡದಿರುವುದರಿಂದ ಗ್ರಾಮೀಣ ರಸ್ತೆಗಳು ಸೇರಿದಂತೆ ಮುಖ್ಯರಸ್ತೆಗಳು ಯಾವುದೇ ನಿರ್ವಹಣೆ ಇಲ್ಲದೇ ಸಂಪೂರ್ಣವಾಗಿ ಹಾಳಾಗಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ.ಆದ್ದರಿಂದ ಇಂದು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಮತ್ತೊಮ್ಮೆ ಸರಕಾರದ ಗಮನ ಸೆಳೆದು ಅನುದಾನ ಬಿಡುಗಡೆಯಾಗದಿರುವ ಹಿನ್ನೆಲೆಯಲ್ಲಿ ಆಗಿರುವ ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ಕೂಡಲೇ 10 ಕೋಟಿ ಅನುದಾನವನ್ನು ಬಿಡುಗಡೆ ಮಾಡುವಂತೆ ಸರಕಾರವನ್ನು ಒತ್ತಾಯಿಸಿದರು.
.
.
