Share this news

ಬೆಂಗಳೂರು: 2008-09ರಲ್ಲಿ ಗ್ರಾಮ ನ್ಯಾಯಾಲಯ ಸ್ಥಾಪನೆ ಬಗ್ಗೆ ಕಾನೂನು ತರಲಾಗಿತ್ತು. ಅದರಂತೆ 100 ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ಮೂಲಕ ಅನುಮತಿ ನೀಡಿದೆ ಎಂದು ಸಚಿವ ಹೆಚ್‌ಕೆ ಪಾಟೀಲ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 100 ಗ್ರಾಮ ನ್ಯಾಯಾಲಯ ಸ್ಥಾಪನೆಗೆ ಅಂದಾಜು 25-30 ಕೋಟಿ ವೆಚ್ಚ ತಗಲುವ ಸಾಧ್ಯತೆಯಿದೆ ಎಂದರು.

ಒಟ್ಟು ಕೃಷಿ ತೋಟಗಾರಿಕೆ ನಷ್ಟ 33,770 ಕೋಟಿ ರೂ. ಆಗಿದ್ದು, ನಾವು ಕೃಷಿ ತೋಟಗಾರಿಕೆ ನಷ್ಟಕ್ಕೆ 4,414 ಕೋಟಿ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದೇವೆ. 5,326 ಕೋಟಿ ರೂಪಾಯಿ ಒಟ್ಟು ನಷ್ಟ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದೇವೆ ಎಂದರು.
ಕಡ್ಡಾಯ ಗ್ರಾಮೀಣ ಸೇವೆಯಿಂದ ವೈದ್ಯರಿಗೆ ವಿನಾಯಿತಿ ನೀಡಿ ನಿರ್ಧಾರ ಕೈಗೊಳ್ಳಲಾಗಿದ್ದು, ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ಬಿಲ್‌ಗೆ ಸಂಪುಟ ಸಭೆ ಅನುಮೋದನೆ ನೀಡಿದೆ. ಸುಗ್ರೀವಾಜ್ಞೆ ಮೂಲಕ ವಿಧೇಯಕಕ್ಕೆ ಅನುಮೋದನೆ ಪಡೆಯಲು ನಿರ್ಧಾರ ಕೈಗೊಳ್ಳಲಾಗಿದೆ. ವೈದ್ಯರಿಗೆ ಕಡ್ಡಾಯ ಗ್ರಾಮೀಣ ಸೇವೆಯನ್ನು ಬದಲಾವಣೆ ಮಾಡಲು ತೀರ್ಮಾನಿಸಲಾಗಿದ್ದು, ಖಾಲಿ ಹುದ್ದೆಗಳಿಗೆ ಅಗತ್ಯವಿರುವಷ್ಟು ಮಾತ್ರ ಕಡ್ಡಾಯ ಗ್ರಾಮೀಣ ಸೇವೆ ನಿಗದಿಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ನೈಋತ್ಯ ಮುಂಗಾರಿನಲ್ಲಿ ಮಳೆ ಕೊರತೆಯಿಂದ ಬರಗಾಲ ಘೋಷಣೆ ಮಾಡಲಾಗಿದೆ. 195 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿದ್ದೆವು. ಇದರ ಜೊತೆಗೆ 21 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಹೊಸದಾಗಿ 21 ತಾಲೂಕು ಬರಪೀಡಿತ ಎಂದು ಘೋಷಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮಾಹಿತಿ ನೀಡಿದರು. ಆಹಾರ ಇಲಾಖೆಯಿಂದ ಅಕ್ಕಿ ಒದಗಿಸುವ ವ್ಯವಸ್ಥೆ ಬಗ್ಗೆ ಚರ್ಚೆಯಾಗಿದೆ. ಈಗ ಇರುವ ಪದ್ಧತಿಯನ್ನೇ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಐದು ಕೆಜಿ ಅಕ್ಕಿ ಕೊಡಬೇಕಾ ಅಥವಾ ನೀಡಲಾಗುತ್ತಿರುವ ಹಣ ಮುಂದುವರಿಸಬೇಕಾ ಎಂಬ ಚರ್ಚೆಯಾಗಿದೆ. ಸದ್ಯದ ಪದ್ದತಿಯನ್ನೇ ಮುಂದುವರಿಸಲು ಕ್ಯಾಬಿನೆಟ್ ನಿರ್ಧಾರ ಕೈಗೊಂಡಿದೆ ಎಂದು ಪಾಟೀಲ್ ತಿಳಿಸಿದರು.

ವಾಹನಗಳ ಸಿಎನ್‌ಜಿ, ಗೃಹ ಬಳಕೆಯ ಪಿಎನ್‌ಜಿ ಬಳಕೆಗೆ ರಾಜ್ಯ ಅನಿಲ ನೀತಿ ರೂಪಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಷನ್ ನೆಟ್‌ವರ್ಕ್ ಪಾಲಿಸಿಗೆ ಅನುಮೋದನೆ ನೀಡಲಾಗಿದೆ ಎಂದರು. ಅಲ್ಲದೆ ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮೀ ಯೋಜನೆ ವಿಸ್ತರಣೆ, ಷಿ ಇಲಾಖೆಯಿಂದ ರಸಗೊಬ್ಬರ ದಾಸ್ತಾನಿಗೆ 200 ಕೋಟಿ ರೂ ಬಂಡವಾಳ ಸಾಲ ತೆಗೆದುಕೊಳ್ಳಲು ಸರ್ಕಾರಿ ಖಾಸರ್ಕಾರಿ ಖಾತರಿಗೆ ಅನುಮತಿ, ಪೊಲೀಸ್ ತರಬೇತಿ ಶಾಲೆಗಳ ಬಲವರ್ಧನೆ ಗೆ ಅಗತ್ಯ ಸಾಮಾಗ್ರಿ ಒದಗಿಸಲು 20 ಕೋಟಿ ಆಡಳಿತಾತ್ಮಕ ಅನುಮೋದನೆ, ಬೆಳಗಾವಿಯ ಸುವರ್ಣಸೌಧದಲ್ಲೇ ಅಧಿವೇಶನ ನಡೆಸುವ ಬಗ್ಗೆ ಚರ್ಚೆ, ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡುವ ಅಧಿಕಾರ ಸಿಎಂ ವಿವೇಚನೆಗೆ, ನಗರಾಭಿವೃದ್ಧಿ ಇಲಾಖೆಯಿಂದ ಎನ್.ಜಿ.ಟಿ ಅನುಸರಣೆಗೆ ತ್ವರಿತ ಪರಿಸರ ಪರಿಹಾರ ನಿಧಿ ಅಡಿಯಲ್ಲಿ 400.24 ಕೋಟಿ ವೆಚ್ಚದಲ್ಲಿ 110 ಮಲ ತ್ಯಾಜ್ಯ ಸಂಸ್ಕರಣ ಘಟಕಗಳನ್ನು ಸ್ಥಾಪನೆ ಮಾಡಲು ಕ್ಯಾಬಿನೆಟ್ ಅನುಮೋದನೆ, 40 ಕೋಟಿ ಅಂದಾಜು ವೆಚ್ಚದಲ್ಲಿ ಸೆಸ್ ಪೂಲ್ ವೆಹಿಕಲ್ ಖರೀದಿಗೆ ಅನುಮೋದನೆ, ಕೃಷಿ ಇಲಾಖೆಯಿಂದ ರಸಗೊಬ್ಬರ ದಾಸ್ತಾನಿಗೆ 200 ಕೋಟಿ ರೂ ಬಂಡವಾಳ ಸಾಲ ತೆಗೆದುಕೊಳ್ಳಲು ಸರ್ಕಾರಿ ಖಾತರಿಗೆ ಅನುಮತಿ ಇತ್ಯಾದಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

 

 

 

 

 

 

 

 

Leave a Reply

Your email address will not be published. Required fields are marked *