ಕಾರ್ಕಳ: ತಾಲೂಕಿನ ಮಾಳ ಎಸ್‌ಕೆ ಬಾರ್ಡರ್ ಬಳಿ ಇಂದು ಮುಂಜಾನೆ ಲಾರಿಯೊಂದು ಪಲ್ಟಿಯಾಗಿದ್ದು ಲಾರಿಯಲ್ಲಿದ್ದ 11 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ತೆಲಂಗಾಣದಿಂದ ಮಂಗಳೂರಿಗೆ ಪ್ಲಾಸ್ಟಿಕ್ ಐಟಂಗಳನ್ನು ಸಾಗಿಸುತ್ತಿದ್ದ ಲಾರಿ ಇಂದು (ಎ.7) ಮುಂಜಾನೆ ಎಸ್‌ಕೆ ಬಾರ್ಡರ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಗಾಯಾಳುಗಳನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.