Share this news

ಕಾರ್ಕಳ :ಕುಕ್ಕುಂದೂರು ಗ್ರಾಮದ ಗಣಿತನಗರದಲ್ಲಿನ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಮಹಾಗಣಪತಿ ದೇವಸ್ಥಾನದ 11ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಮೇ 29 ರಂದು ಜರುಗಲಿದೆ.
ಎಸೆಸ್ಸೆಲ್ಸಿ, ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಜ್ಞಾನಸುಧಾ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ ವತಿಯಿಂದ 68.79ಲಕ್ಷ ರೂ ವಿದ್ಯಾರ್ಥಿವೇತನ ವಿತರಣೆ ನಡೆಯಲಿದೆ.
ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಡಿ.22 ರಂದು ಸಂಸ್ಥಾಪಕರ ದಿನಾಚರಣೆಯಂದು ವಿತರಿಸಲಾಗುವುದು.
ಈ ಸಮಾರಂಭದಲ್ಲಿ ಉಡುಪಿಯ ಶ್ರೀ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ಮುಖ್ಯ ಅತಿಥಿಯಾಗಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.)ನ ಸಂಸ್ಥಾಪಕ ನಾಡೋಜ ಡಾ. ಜಿ. ಶಂಕರ್‌ ಭಾಗವಹಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ.ಸುನಿಲ್ ಕುಮಾರ್‌ರವರು ವಹಿಸಿಕೊಳ್ಳಲಿದ್ದಾರೆ ಎಂದು ಟ್ರಸ್ಟ್‌ ನ ಆದ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಶೈಕ್ಷಣಿಕ ವರ್ಷದಲ್ಲಿಯೂ ಎರಡು ಹಂತದ ವಿದ್ಯಾರ್ಥಿ ವೇತನದಲ್ಲಿ ಒಟ್ಟು ರೂ.1 ಕೋಟಿ 41 ಲಕ್ಷ ವಿದ್ಯಾರ್ಥಿವೇತನವನ್ನು ಸಂಸ್ಥೆ ನೀಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

 

 

 

 

                        

                          

 

 

 

 

 

                        

                          

Leave a Reply

Your email address will not be published. Required fields are marked *