ಚೆನ್ನೈ: ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿಜಯರಾಂ ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ಮೃತಪಟ್ಟಿದ್ದಾರೆ.
ವಾಣಿ ಜಯರಾಂ ಅವರಿಗೆ ಮೊನ್ನೆಯಷ್ಟೇ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಆದರೆ 10 ಸಾವಿರಕ್ಕೂ ಹೆಚ್ಚು ಹಾಡುಗಳ ಮೂಲಕ ಜನರನ್ನು ರಂಜಿಸಿದ ಗಾಯಕಿ ನಿಗೂಢವಾಗಿ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ತಮಿಳು, ತೆಲಗು, ಕನ್ನಡ, ಮಲಯಾಳಂ, ಹಿಂದಿ, ಉರ್ದು, ಮರಾಟಿ, ಬೆಂಗಾಲಿ, ಬೋಜ್‌ಪುರಿ, ತುಳು ಮತ್ತು ಓಡಿಯಾ ಭಾಷೆಗಳಲ್ಲಿ ಹಾಡಿರುವ ವಾಣಿ ಜಯರಾಂ ನಿಧನಕ್ಕೆ ಚಿತ್ರರಂಗ ಗಣ್ಯರು ಆಘಾತ ವ್ಯಕ್ತಪಡಿಸಿದ್ದಾರೆ
ಚೆನ್ನೈ ಹಡ್ಡೊಸ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ವಾಣಿ ಜಯರಾಂ ಮೃತಪಟ್ಟಿದ್ದಾರೆ. ವಾಣಿ ಜಯರಾಂ ತಲೆಗೆ ತೀವ್ರವಾಗಿ ಗಾಯವಾಗಿದ್ದು, ಇದೇ ಗಾಯದಿಂದ ವಾಣಿ ಜಯರಾಂ ಮೃತಪಟ್ಟಿರುವ ಸಾಧ್ಯತೆ ಇದೆ. ಈ ಕುರಿತು ವಾಣಿ ಜಯರಾಂ ಮನೆ ಕೆಲಸದವರ ಹೇಳಿಕೆಯನ್ನು ಪಡೆದಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. 2018ರಲ್ಲಿ ಪತಿ ಹಾಗೂ ಉದ್ಯಮಿ ಜಯರಾಂ ನಿಧನರಾಗಿದ್ದರು.