ಬೆಳಗಾವಿ : ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಘೋಷಿಸಿ, ಕೂಡಲೇ ನೀತಿ ಸಂಹಿತೆ ಜಾರಿ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭಾರತದ ಚುನಾವಣಾ ಆಯೋಗಕ್ಕೆ ಮನವಿ ಮಾಡಿ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಕಾನೂನು ಉಲ್ಲಂಘನೆಯನ್ನು ತಡೆಯುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಶೀಘ್ರದಲ್ಲೇ ಚುನಾವಣೆ ದಿನಾಂಕ ಮತ್ತು ನೀತಿ ಸಂಹಿತೆ ಜಾರಿ ಮಾಡಬೇಕೆಂದು ಒತ್ತಾಯಿಸುತ್ತೇವೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ಜನರ ತೆರಿಗೆ ಹಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಬಿಜೆಪಿಯ ಕೆಲವು ಅಭ್ಯರ್ಥಿಗಳು ಮತ್ತು ಟಿಕೆಟ್ ಆಕಾಂಕ್ಷಿಗಳು ಜನರಿಗೆ ಹಣ ಮತ್ತು ಗಿಫ್ಟ್ಗಳನ್ನು ನೀಡುತ್ತಿದ್ದಾರೆ. ಇದನ್ನು ತಡೆಗಟ್ಟಲು ಚುನಾವಣಾ ಆಯೋಗ ಕೂಡಲೆ ನೀತಿ ಸಂಹಿತೆ ಜಾರಿಗೆ ಮಾಡಬೇಕೆಂದು ಎಂದು ಒತ್ತಾಯಿಸಿದರು.