Share this news

ನವದೆಹಲಿ: 2 ಸಾವಿರ ಮುಖಬೆಲೆಯ ನೋಟುಗಳ ಚಲಾವಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕ್‌ ಆದೇಶಿಸಿದೆ.ಎಲ್ಲಾ ಬ್ಯಾಂಕ್ ಗಳು ಹಾಗೂ ಹಣಕಾಸು ಸಂಸ್ಥೆಗಳು2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾಯಿಸದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ.

ಹಾಲಿ ಇರುವ ನೋಟುಗಳನ್ನು ಗ್ರಾಹಕರು ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದ್ದು,ದಿನಕ್ಕೆ ಗರಿಷ್ಠ 20 ಸಾವಿರ ಮೌಲ್ಯದ ನೋಟುಗಳನ್ನು ಮಾತ್ರ ವಿನಿಮಯ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.ಬ್ಯಾಂಕುಗಳಲ್ಲಿ 2000 ರೂ. ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಸೆ. 30ರವರೆಗೂ ಅವಕಾಶ ಕಲ್ಪಿಸಲಾಗಿದೆ.

ಕಳೆದ 2016ರ ನವೆಂಬರ್ ನಲ್ಲಿ ಕೇಂದ್ರ ಸರ್ಕಾರ 500 ಹಾಗೂ 1000 ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡಿ,ಇದರ ಬದಲಿಗೆ 2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತರಲಾಗಿತ್ತು.ಆದರೆ ಆರ್ ಬಿ‌ಐ ಕಳೆದ
2018 ರಲ್ಲಿ 2 ಸಾವಿರ ಮುಖಬೆಲೆಯ ನೋಟುಗಳ ಮುದ್ರಣ ಸ್ಥಗಿತಗೊಳಿಸಿ ಅಂದೇ ನೋಟುಗಳನ್ನು ನಿಷೇಧಿಸುವ ಮುನ್ಸೂಚನೆ ನೀಡಿತ್ತು .
ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶ ನೀಡಲಾಗಿದೆ

 

Leave a Reply

Your email address will not be published. Required fields are marked *