Share this news

ಬೆಂಗಳೂರು: ಪಾವತಿಯಾಗದೇ ಇರುವ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಮತ್ತು ಜುಲೈ ತಿಂಗಳ ಕಂತಿನ ಎರಡೂ ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.

ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಇನ್ನೂ ಪಾವತಿಯಾಗದೇ ಇರುವುದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಈ ಬಗ್ಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಚುನಾವಣೆ ನೀತಿ ಸಂಹಿತೆಯಿAದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಗೃಹಲಕ್ಷ್ಮಿ ಜೂನ್ ಕಂತಿನ ಹಣ ಬಿಡುಗಡೆ ಮಾಡದೇ ಇರುವುದಕ್ಕೆ ವಿಪಕ್ಷಗಳು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದವು. ಉಚಿತ ಭರವಸೆಗಳನ್ನು ಈಡೇರಿಸಲು ಹೋಗಿ ಸರ್ಕಾರ ದಿವಾಳಿಯಾಗಿದ್ದು, ಯೋಜನೆಗಳನ್ನು ಮುಂದುವರೆಸುವುದು ಸಾಧ್ಯವಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಟೀಕಿಸಿದ್ದರು.

ಏನೇ ಆದರೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದು, ಸರ್ಕಾರ ಇದಕ್ಕೆ ಹಣವನ್ನು ಹೊಂದಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದೆ. ಈಗ ಗೃಹಲಕ್ಷ್ಮಿ ಯೋಜನೆ ಎರಡು ತಿಂಗಳ ಹಣ ಗೃಹಲಕ್ಷ್ಮಿಯರ ಖಾತೆಗೆ ಬರಲಿದೆ ಎಂದು ಸಚಿವರು ಪ್ರತಿಕ್ರಿಯಿಸಿದ್ದಾರೆ.

                        

                          

                        

                          

 

 

Leave a Reply

Your email address will not be published. Required fields are marked *