ಬೆಂಗಳೂರು :ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2 ಸಾವಿರ ಕೋಟಿ ರೂ. ಬರಪರಿಹಾರ ಬಿಡುಗಡೆಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರ ಸರ್ಕಾರವು ಬರ ಪರಿಹಾರ ಕೊಡುತ್ತಿಲ್ಲ ಎಂದು ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ರಾಜ್ಯದಲ್ಲಿ ಕೊಡುತ್ತಿರುವ ಅನ್ನಭಾಗ್ಯದ ಅಕ್ಕಿ ಪ್ರಧಾನಿ ಮೋದಿಯವರ ಅನ್ನಭಾಗ್ಯ ಯೋಜನೆ,ಇದು ನಾವೇ ಕೊಡುತ್ತಿರುವ ಅಕ್ಕಿ ಎಂದು ಸಿದ್ದರಾಮಯ್ಯ ರಾಜ್ಯದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ ನೀಡುತ್ತಿಲ್ಲ ಎನ್ನುವ ಆರೋಪದ ನಡುವೆ ಮಾಜಿ ಸಿಎಂ ಹೆ.ಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.ಆದರೆ ರಾಜ್ಯ ಬಿಜೆಪಿ ನಾಯಕರು ಮಾತ್ರ ಬರಪರಿಹಾರದ ಕುರಿತು ಹೇಳಿಕೆಯನ್ನೇ ನೀಡದೇ ಮೌನವಹಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ