Month: May 2023

ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ

ಬೆಂಗಳೂರು:ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇಂದು ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬಂದ ನಂತರ ಹಾವೇರಿಯ ಶಿಗ್ಗಾಂವಿಯಿಂದ ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ…

ಹ್ಯಾಟ್ರಿಕ್ ಗೆಲುವು ಸಾಧಿಸಿದ ಸುನಿಲ್ ಕುಮಾರ್ ಅವರಿಗೆ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ: ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಕಾರ್ಕಳ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಮೂರನೇ ಬಾರಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಫಲಿತಾಂಶ ಪ್ರಕಟವಾದ ನಂತರ ಮತ ಎಣಿಕೆ ಕೇಂದ್ರದಿAದ ಹೊರಬಂದ ಸುನಿಲ್ ಕುಮಾರ್ ಅವರನ್ನು ಕಾರ್ಯಕರ್ತರು ಎತ್ತಿಕೊಂಡು…

ಕಾರ್ಕಳದಲ್ಲಿ ವಾಮಮಾರ್ಗದ ಮೂಲಕ ಬಿಜೆಪಿ ಗೆಲುವು ಸಧಿಸಿದೆ: ರಾಜ್ಯದಲ್ಲಿ ನಮ್ಮದೇ ಸರ್ಕಾರ ಬಂದಿದ್ದು ಕಾರ್ಯಕರ್ತರು ಧೃತಿಗೆಡಬೇಕಿಲ್ಲ: ಉದಯ ಶೆಟ್ಟಿ ಮುನಿಯಾಲು

ಕಾರ್ಕಳ: ಹಣ ಹಾಗೂ ಹೆಂಡವನ್ನು ಹಂಚುವ ಮೂಲಕ ಬಿಜೆಪಿ ವಾಮಮಾರ್ಗದಲ್ಲಿ ಕಾರ್ಕಳದಲ್ಲಿ ಗೆಲುವು ಸಾಧಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದಿಂದ ಅಧಿಜಾರಕ್ಕೆ ಬಂದಿದ್ದು ನಮ್ಮ ಕಾರ್ಯಕರ್ತರು ಧೃತಿಗೆಡಬೇಕಿಲ್ಲ ಮುಂದಿನ 5 ವರ್ಷಗಳಲ್ಲಿ ಕಾರ್ಯಕರ್ತರ ಜತೆಗಿದ್ದು ಜನಪರ ಕೆಲಸ ಮಾಡುವುದಾಗಿ ಕಾಂಗ್ರೆಸ್ ಪರಾಜಿತ…

ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ ಗೆಲುವು: ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಮುಸ್ಲಿಂ ಯುವಕರು

ಕಾರವಾರ:ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬಹುಮತ ಸಿಕ್ಕಿದ್ದು, ಭಟ್ಕಳದಲ್ಲೂ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವಾಗಿದೆ. ಹೀಗಾಗಿ ಮುಸ್ಲಿಂ ಯುವಕರು ಇಸ್ಲಾಂ ಧ್ವಜವನ್ನು ಹಿಡಿದು ಸಂಭ್ರಮಿಸಿದ್ದಲ್ಲದೆ, ಕೇಸರಿ ಧ್ವಜದ ಪಕ್ಕ ಅದನ್ನು ಅಳವಡಿಸಿದ್ದಾರೆ. ಭಟ್ಕಳ ಸಂಶುದ್ದಿನ್ ಸರ್ಕಲ್ ಮೇಲೆ ನಿಂತು ಕೇಸರಿ ಭಾವುಟ ಪಕ್ಕದಲ್ಲಿ…

ಪುತ್ತೂರು ಹಿಂದುತ್ವದ ಭದ್ರ ಕೋಟೆ ಎಂದು ಸಾಬೀತು ಪಡಿಸಿದ ಪುತ್ತಿಲ : ಜನನಾಯಕರಾಗಿ ಅಶೋಕ್ ರೈ ಆಯ್ಕೆ !

ಪುತ್ತೂರು : ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಜನನಾಯಕರಾಗಿ ಅಶೋಕ್ ರೈ ಗೆಲುವು ಪಡೆದಿದ್ದು ಇತ್ತ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಪುತ್ತೂರು ಮತ್ತೋಮ್ಮೆ ಹಿಂದುತ್ವದ ಭದ್ರ ಕೋಟೆ ಏಂದು ಸಾಭೀತು ಪಡಿಸಿದ್ದು ಇಲ್ಲಿ ಪಕ್ಷೇತರ ಅಭ್ಯರ್ಥಿ…

ಇದು ಕರ್ನಾಟಕದ ಜನತೆಯ ಗೆಲುವು, ದ್ವೇಷದ ವಿರುದ್ಧ ಪ್ರೀತಿಗೆ ಸಿಕ್ಕ ಜಯ: ರಾಹುಲ್ ಗಾಂಧಿ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿಯಾಗಿ ಮುನ್ನಡೆ ಸಾಧಿಸಿ, ಹಲವು ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರುತ್ತಿದ್ದಂತೆ ದೆಹಲಿಯಲ್ಲಿ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾನು ಮೊದಲಿಗೆ ಕರ್ನಾಟಕದ ಜನತೆಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನಾವು ಕರ್ನಾಟಕದಲ್ಲಿ ದ್ವೇಷದಿಂದ ಹೋರಾಡಿಲ್ಲ,…

ಕಾಂಗ್ರೆಸ್ ಬಿಜೆಪಿ ರೋಚಕ ಹಣಾಹಣಿ:ಕಾರ್ಕಳದಲ್ಲಿ ಕೊನೆಗೂ ಅರಳಿದ ಕಮಲ: ಸುನಿಲ್ ಕುಮಾರ್ ಹ್ಯಾಟ್ರಿಕ್ ಗೆಲುವು

ಕಾರ್ಕಳ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆದಿದ್ದು, ಕೊನೆಗೂ ಬಿಜೆಪಿ ಗೆಲ್ಲುವ ಮೂಲಕ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲು ವಿರುದ್ಧ ಕೇವಲ 4404…

ರಾಜ್ಯ ವಿಧಾನಸಭಾ ಚುನಾವಣೆ-ಕಾಂಗ್ರೆಸ್ ಭರ್ಜರಿ ಗೆಲುವು- ಬಿಜೆಪಿಯ ಹಲವು ಹಾಲಿ ಸಚಿವರಿಗೆ ಸೋಲು!:ನಾಳೆ ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆ: ಸಿಎಂ ಹೆಸರು ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.ಬಿಜೆಪಿಯ ಹಾಲಿ ಸಚಿವರಿಗೆ ಬಿಗ್ ಶಾಕ್ ಎದುರಾಗಿದ್ದು, ಸಚಿವ ಶ್ರೀರಾಮುಲು, ಸಚಿವ ಸುಧಾಕರ್, ಮುನಿರತ್ನ ಸೇರಿದಂತೆ ಹಲವು ಸಚಿವರು ಸೋಲನುಭವಿಸಿದ್ದಾರೆ. ಬಳ್ಳಾರಿ ಗ್ರಾಮೀಣಾ ಕ್ಷೇತ್ರದಲ್ಲಿ ಬಿ. ಶ್ರೀರಾಮುಲು ಭಾರೀ ಅಂತರದಿಂದ ಸೋಲನುಭವಿಸಿದ್ದಾರೆ.…

ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಯು.ಟಿ ಖಾದರ್​​ ಗೆಲುವು

ಮಂಗಳೂರು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಇದೀಗ ಯು.ಟಿ ಖಾದರ್​​ ಗೆಲುವು ಸಾಧಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ. ಈಡಿ ದೇಶವೇ…

ಮಾಜಿ ಸಿಎಂ ಸಿದ್ದರಾಮಯ್ಯ ಭಾವ ರಾಮೇಗೌಡ ನಿಧನ

ಮೈಸೂರು : ಇಂದು ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಈಗಾಗಲೇ ಕಾಂಗ್ರೆಸ್ 130 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾವ ನಿಧನರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ…