Month: June 2023

ನಿಧನ: ಶ್ರೀಧರ ಶೆಟ್ಟಿ, ಮುಕ್ಕಾಲ್ದಿ ಮನೆ ಪಾಲಡ್ಕ

ಮೂಡಬಿದಿರೆ: ಪಾಲಡ್ಕ ಕೊಡಮಣಿತ್ತಾಯ- ಕುಕ್ಕಿನಂತಾಯ ದೈವಸ್ಥಾನದ ದೈವರಾಧಕರು ಹಾಗೂ ಪರಿಚಾರಕರಾಗಿದ್ದ (ಮುಕ್ಕಾಲ್ದಿ) ಶ್ರೀಧರ ಶೆಟ್ಟಿ ಸೋಮವಾರ ಪಾಲಡ್ಕದ ತಮ್ಮ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ,ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.

ವ್ಯವಸ್ಥೆಯಲ್ಲಿ ಉದ್ದೇಶಪೂರ್ವಕ ಹಸ್ತಕ್ಷೇಪವೇ ಒಡಿಶಾ ರೈಲು ಅಪಘಾತಕ್ಕೆ ಕಾರಣ: ರೈಲ್ವೆ ಅಧಿಕಾರಿಗಳು

ನವದೆಹಲಿ: ಬಾಲಸೋರ್ ರೈಲು ಅಪಘಾತದ ಬಗ್ಗೆ ಸಿಬಿಐ ಸೋಮವಾರ ತನ್ನ ತನಿಖೆಯನ್ನು ಪ್ರಾರಂಭಿಸುತ್ತಿದ್ದಂತೆ, ಎಲೆಕ್ಟ್ರಾನಿಕ್ ಇಂಟರ್ ಲಾಕಿಂಗ್ ವ್ಯವಸ್ಥೆಯಲ್ಲಿ ಉದ್ದೇಶಪೂರ್ವಕ ಹಸ್ತಕ್ಷೇಪದಿಂದಾಗಿ ಅಪಘಾತ ಸಂಭವಿಸಿದೆ ಎಂದು ಉನ್ನತ ರೈಲ್ವೆ ಅಧಿಕಾರಿಗಳು ಹೇಳಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈಗಾಗಲೇ ಸಿಬಿಐ ತನಿಖೆ…

ಬಾಡಿಗೆ ಮನೆಯವರಿಗೆ ಉಚಿತ ವಿದ್ಯುತ್ ಇಲ್ಲ: ಗೃಹಜ್ಯೋತಿ ಯೋಜನೆಯ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಯ ಲಾಭದಿಂದ ಬಾಡಿಗೆ ಮನೆಯಲ್ಲಿ ವಾಸವಿರುವವರು ವಂಚಿತರಾಗುವ ಸಾಧ್ಯತೆಯಿದೆ. ಎಲ್ಲರಿಗೂ 200 ಯೂನಿಟ್‌ವರೆಗೂ ಉಚಿತವಾಗಿ ವಿದ್ಯುತ್‌ ನೀಡುವ ಈ ಯೋಜನೆಯ ಮಾರ್ಗಸೂಚಿಯನ್ನು ಇಂಧನ ಇಲಾಖೆ ಸೋಮವಾರ ಬಿಡುಗಡೆ ಮಾಡಿದ್ದು, ಅದರಲ್ಲಿ ವ್ಯಕ್ತಿಯೊಬ್ಬರು ತಮ್ಮ ಹೆಸರಿನಲ್ಲಿ…

ಯಾದಗಿರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್​​ ಡಿಕ್ಕಿ: ಐವರು ಸ್ಥಳದಲ್ಲೇ ಸಾವು, 13 ಮಂದಿಗೆ ಗಾಯ

ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಆಂಧ್ರಪ್ರದೇಶ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರು ಆಂಧ್ರ ಜಿಲ್ಲೆಯ ನಂದ್ಯಾಲ ಜಿಲ್ಲೆಯ…

ಜನರ ಸಮಸ್ಯೆಗಳಿಗೆ ಸ್ಪಂದಿಸದೇ ಉಡಾಫೆ,ಅಸಡ್ಡೆ ತೋರಿದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಸೋಮವಾರ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು. ಜನ ಬದಲಾವಣೆ ಬಯಸಿದ್ದು ಅವರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:06.06.2023,ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಜ್ಯೇಷ್ಠ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಪೂರ್ವಾಷಾಢ , ರಾಹುಕಾಲ -03:42 ರಿಂದ 05:19 ಗುಳಿಕಕಾಲ-12:30 ರಿಂದ 02:06 ಸೂರ್ಯೋದಯ (ಉಡುಪಿ) 06:03 ಸೂರ್ಯಾಸ್ತ – 06:54 ರಾಶಿ ಭವಿಷ್ಯ: ಮೇಷ(Aries): ವ್ಯವಹಾರ ಕಾರ್ಯಗಳನ್ನು ಉತ್ತಮವಾಗಿ…

ಅಜೆಕಾರಿನಲ್ಲಿ ನೂತನ ಅಜೆಕಾರು ಮೆಡಿಕಲ್ಸ್ ಶುಭಾರಂಭ

ಕಾರ್ಕಳ: ಅಜೆಕಾರಿನ ಚರ್ಚ್ ರೋಡ್ ಬಳಿಯ ಶಾಲೋಮ್ ಪ್ರಗತಿ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಅಜೆಕಾರು ಮೆಡಿಕಲ್ಸ್ ಜೂನ್ 5ರಂದು ಶುಭಾರಂಭಗೊಂಡಿತು. ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅನುಷಾ ಶೆಟ್ಟಿ ನೂತನ ಮೆಡಿಕಲ್ಸ್ ಉದ್ಘಾಟಿಸಿ ಶುಭಕೋರಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ…

‘ರಾಜ್ಯ ಸರ್ಕಾರ’ದಿಂದ ‘ಗೃಹ ಜ್ಯೋತಿ ಯೋಜನೆ’ ಜಾರಿಗೊಳಿಸಿ ಅಧಿಕೃತ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಇಂದು ಐದು ಗ್ಯಾರಂಟಿಗಳಲ್ಲಿ ಇದುವರೆಗೆ ನಾಲ್ಕು ಗ್ಯಾರಂಟಿಗಳಿಗೆ ಅಧಿಕೃತ ಆದೇಶ ಹೊರಡಿಸಿದೆ. ಇಂದು ಶಕ್ತಿ ಯೋಜನೆಯ ಬೆನ್ನಲ್ಲೇ, ಗೃಹ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬAಧ ಇಂದು ಇಂಧನ ಇಲಾಖೆಯ ಸರ್ಕಾರದ ಅಧೀನ…

32 ವರ್ಷದ ಹಿಂದಿನ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ

ಹೊಸದಿಲ್ಲಿ : ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ಕೊಲೆ ಪ್ರಕರಣವೊಂದರಲ್ಲಿ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ. 32 ವರ್ಷಗಳ ಹಿಂದಿನ ಕೊಲೆ ಪ್ರಕರಣದಲ್ಲಿ ಉತ್ತರ ಪ್ರದೇಶದ ವಾರಾಣಸಿಯ ನ್ಯಾಯಾಲಯವು ಜೈಲಿನಲ್ಲಿರುವ ದರೋಡೆಕೋರ ಮುಖ್ತಾರ್ ಅನ್ಸಾರಿ ಅವರನ್ನು ಇಂದು ದೋಷಿ ಎಂದು ಘೋಷಿಸಿ…

ರಾಜ್ಯ ಸರ್ಕಾರ’ದಿಂದ ‘ಶಕ್ತಿ ಯೋಜನೆ’ ಜಾರಿಗೊಳಿಸಿ ಅಧಿಕೃತ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಈಗಾಗಲೇ ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗೆ ಮಾರ್ಗಸೂಚಿಯನ್ನು ಪ್ರಕಟಿಸಿತ್ತು. ಈ ಬೆನ್ನಲ್ಲೇ ಇಂದು ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ ಜಾರಿಗೊಳಿಸಿ, ಆಡಳಿತಾತ್ಮಕ…