Month: July 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:25.07.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ವರ್ಷ ಋತು,ಕರ್ಕಟ ಮಾಸ ಶುಕ್ಲಪಕ್ಷ, ನಕ್ಷತ್ರ:ಚಿತ್ರಾ, ರಾಹುಕಾಲ 03:48 ರಿಂದ 05:24 ಗುಳಿಕಕಾಲ-12:38 ರಿಂದ 02:13 ಸೂರ್ಯೋದಯ (ಉಡುಪಿ) 06:15 ಸೂರ್ಯಾಸ್ತ – 06:59 ರಾಶಿ ಭವಿಷ್ಯ: ಮೇಷ ರಾಶಿ (Aries)…

ಗೃಹಲಕ್ಷ್ಮಿ ಅರ್ಜಿಗೆ ಸೇವಾ ಕೇಂದ್ರಗಳು ದುಡ್ಡು ಪಡೆದರೆ, ಅಸಡ್ಡೆ ತೋರಿದರೆ ಕ್ರಿಮಿನಲ್ ಕೇಸ್ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸೇವಾ ಕೇಂದ್ರಗಳು ದುಡ್ಡು ಪಡೆದರೆ ಅಥವಾ ಅಸಡ್ಡೆ ತೋರಿದರೆ ಅಂತಹವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ…

ಕರಾವಳಿಯಲ್ಲಿ ಮುಂದುವರಿದ ಮಳೆಯ ಅಬ್ಬರ:ನಾಳೆಯೂ (ಜುಲೈ 25) ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆಯೂ (ಜುಲೈ 25ರಂದು) ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶಿಸಿದ್ದಾರೆ‌.…

ಕರ್ನಾಟಕ ಹೈಕೋರ್ಟ್​ನ  6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ : ಪಾಕ್ ಕೈವಾಡ ಶಂಕೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್​ನ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಸಂದೇಶ ಬಂದಿದ್ದು, ಪಾಕಿಸ್ತಾನ ಮೂಲದ ಉಗ್ರರ ಕೈವಾಡವೇ ಎಂಬ ಶಂಕೆ ವ್ಯಕ್ತವಾಗಿದೆ. ಹಣಕ್ಕಾಗಿ ಬೇಡಿಕೆ ಇಟ್ಟಿರುವ ದುಷ್ಕರ್ಮಿಗಳು, ಇದನ್ನು ಈಡೇರಿಸದಿದ್ದರೆ ಕೊಲೆ ದುಬೈ ಗ್ಯಾಂಗ್​ನಿಂದ ಕೊಲೆ ಮಾಡಿಸುವುದಾಗಿ ಬೆದರಿಕೆ ಸಂದೇಶ…

ಟ್ವಿಟರ್ ಗೂಡಿನಿಂದ ಹೊರಬಿದ್ದ ನೀಲಿಹಕ್ಕಿ: ನೂತನ ಲೋಗೋ ಅನಾವರಣಗೊಳಿಸಿದ ಎಲಾನ್ ಮಸ್ಕ್

ಕ್ಯಾಲಿಫೋರ್ನಿಯಾ: ಜಗತ್ತಿನ ನಂಬರ್ ಒನ್ ಶ್ರೀಮಂತ ಎನಿಸಿಕೊಂಡಿರುವ ಎಲಾನ್ ಮಸ್ಕ್ ಜಗತ್ತಿನ ಅತ್ಯಂತ ಪ್ರಸಿದ್ಧ ಸಾಮಾಜಿಕ ಜಾಲತಾಣವಾಗಿರುವ ಟ್ವಿಟರ್ ಕಂಪನಿಯನ್ನು ಖರೀದಿಸಿದ ಬಳಿಕ ಇದೀಗ ಟ್ವಿಟರ್ ಲೋಗೋ ವನ್ನು ಬದಲಿಸುವ ಮೂಲಕ ಟ್ವಿಟರ್ ಗೆ ಹೊಸರೂಪ ಕೊಟ್ಟಿದ್ದಾರೆ. ಸಾಕಷ್ಟು ಜನಪ್ರಿಯತೆ ಹೊಂದಿರುವ…

ಕಾರ್ಕಳ ತಾಲೂಕಿನಲ್ಲೆಡೆ ಭಾರಿ ಗಾಳಿ ಮಳೆ : ಹಲವೆಡೆ ಮನೆಗಳಿಗೆ ಮರ ಬಿದ್ದು ಹಾನಿ

ಕಾರ್ಕಳ : ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು ನಿನ್ನೆ ರಾತ್ರಿ ಬೀಸಿದ ಭಾರಿ ಗಾಳಿ ಮಳೆಗೆ ಕಾರ್ಕಳ ಅನಂತಪದ್ಮನಾಭ ದೇವಸ್ಥಾನದ ಚಂದ್ರಶಾಲೆ ಕಟ್ಟಡದ ಆವರಣ ಗೋಡೆ ಕುಸಿದು ಬಿದ್ದಿದೆ.ನಿಟ್ಟೆ ಗ್ರಾಮದ ಕೆಮ್ಮಣ್ಣು ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣ…

ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ತಾತ್ಕಾಲಿಕ ತಡೆ

ವಾರಾಣಸಿ: ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂಕೋರ್ಟ್​ ತಾತ್ಕಾಲಿಕ ತಡೆ ನೀಡಿದೆ. ಜುಲೈ 26ರವರೆಗೆ ಸಮೀಕ್ಷೆ ನಡೆಸದಂತೆ ಭಾರತೀಯ ಪುರಾತತ್ವ ಇಲಾಖೆಗೆ ಸೂಚನೆ ನೀಡಲಾಗಿದೆ. ಬುಧವಾರ ಸಂಜೆ 5 ಗಂಟೆವರೆಗೆ ಮಸೀದಿ ಸರ್ವೆಗೆ ಸುಪ್ರೀಂ ತಡೆ ನೀಡಿದೆ. ಅಲಹಾಬಾದ್ ಹೈಕೋರ್ಟ್​ನಲ್ಲಿ…

ಖಾಸಗಿ ಬಸ್‌ಗಳಿಗೂ “ಶಕ್ತಿ ಯೋಜನೆ” ವಿಸ್ತರಣೆ ಮಾಡುವಂತೆ ಮನವಿ

ಬೆಂಗಳೂರು :ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮೊದಲ ಗ್ಯಾರಂಟಿಯಾಗಿ ಜಾರಿಗೊಳಿಸಿದ ಶಕ್ತಿ ಯೋಜನೆಯಿಂದ ಖಾಸಗಿ ಬಸ್‌ಗಳಿಗೆ ಭಾರಿ ಹಿನ್ನಡೆಯಾಗಿದೆ. ಆದ್ದರಿಂದ ಎಲ್ಲ ಖಾಸಗಿ ಬಸ್‌ಗಳನ್ನೂ ಕೂಡ ಶಕ್ತಿ ಯೋಜನೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಖಾಸಗಿ ಬಸ್ ಮಾಲೀಕರ ಫೆಡರೇಶನ್ ಅಧ್ಯಕ್ಷ…

ಬೈಲೂರಿನಲ್ಲಿ ಖಾಸಗಿ ಬಸ್-ಟಿಪ್ಪರ್ ಡಿಕ್ಕಿ: ಬಸ್ ಚಾಲಕನಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಬೈಲೂರು ಸಮೀಪದ ಬಸ್ರಿ ಎಂಬಲ್ಲಿ ಖಾಸಗಿ ಬಸ್ ಹಾಗು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬಸ್ ಚಾಲಕ ಗಾಯಗೊಂಡಿರುವ ಘಟನೆ ನಡೆದಿದೆ. ಸೋಮವಾರ ಮುಂಜಾನೆ 10 ಗಂಟೆಗೆ ಉಡುಪಿಯಿಂದ ಕಾರ್ಕಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸೊಂದು ಸರ್ಕಾರಿ ಬಸ್ಸನ್ನು ಓವರ್‌ಟೇಕ್…

ಬಿಗಿ ಭದ್ರತೆಯಲ್ಲಿ ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆ ಆರಂಭ

ವಾರಾಣಸಿ: ವಾರಣಾಸಿ ದೇಗುಲದ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂಬ ಹಿಂದೂ ಭಕ್ತರ ವಾದ ಸತ್ಯಾಸತ್ಯತೆ ಪರೀಕ್ಷಿಸುವ ಸಲುವಾಗಿ ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಗ್ಯಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಮೀಕ್ಷೆ ನಡೆಸುತ್ತಿದೆ. ಅಧಿಕಾರಿಗಳು ಪ್ರವೇಶಿಸುತ್ತಿದ್ದಂತೆಯೇ ಯುಪಿ ಪೊಲೀಸ್ ತಂಡವು ಗ್ಯಾನವಾಪಿ…