Month: August 2023

ನಲ್ಲೂರು ಪಂಚಾಯಿತ್ ಅಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಧಿಕೃತ ಅಭ್ಯರ್ಥಿಯನ್ನೇ ಸೋಲಿಸಿದ ಬಂಡಾಯ ಅಭ್ಯರ್ಥಿ!

ಕಾರ್ಕಳ: ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಹೊತ್ತಿಕೊಂಡಿದ್ದು, ಅವಿರೋಧವಾಗಿ ಆಯ್ಕೆಯಾಗಬೇಕಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಬಿಜೆಪಿ ಬೆಂಬಲಿತ ಅಧಿಕೃತ ಅಭ್ಯರ್ಥಿಯನ್ನೇ ಬಿಜೆಪಿ ಬೆಂಬಲಿತ ಬಂಡಾಯ ಅಭ್ಯರ್ಥಿ ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ.…

ಚಂದ್ರಯಾನ-3 :ಲ್ಯಾಂಡರ್ ವಿಕ್ರಮ್ ಬೇರ್ಪಟ್ಟ ಬಳಿಕ ಕಳುಹಿಸಿದ ಚಂದ್ರನ ಮೊದಲ ಚಿತ್ರ!

ಶ್ರೀಹರಿಕೋಟಾ: ಭಾರತದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಇಂದು (ಆ.18) ಲ್ಯಾಂಡರ್ ವಿಕ್ರಮ್ ಬಾಹ್ಯಾಕಾಶ ನೌಕೆಯಿಂದ ಬೇರ್ಪಟ್ಟ ನಂತರ ತನ್ನ ಆರಂಭಿಕ ಚಂದ್ರನ ಚಿತ್ರಗಳನ್ನು ಬಹಿರಂಗಪಡಿಸಿದೆ. ಬಾಹ್ಯಾಕಾಶ ಸಂಸ್ಥೆ ಇಸ್ರೋ ಲ್ಯಾಂಡರ್ ಇಮೇಜರ್ ಕ್ಯಾಮೆರಾ-1 ತೆಗೆದ ಈ ಅದ್ಭುತ ಫೋಟೋಗಳನ್ನು ತನ್ನ ಎಕ್ಸ್…

ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಶಾಕ್: ನಿಯಮ ಉಲ್ಲಂಘಿಸಿದವರ ಕಾರ್ಡ್ ರದ್ದು!

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿನ ಪಡಿತರ ಕಾರ್ಡ್ ಹೊಂದಿ ಉಚಿತ ಅನ್ನಭಾಗ್ಯ ಯೋಜನೆಯ ಅಕ್ಕಿ ಪಡೆಯಲು ಮುಂದಾಗಿದ್ದ ಜನರನ್ನು ಸರ್ಕಾರ ತೆಡೆಹಿಡಿದಿದೆ. ಅರ್ಹತೆ ಇಲ್ಲದಿದ್ದರೂ ಸರ್ಕಾರದ ಹಲವು ಯೋಜನೆಗಳ ಪ್ರಯೋಜನ ಪಡೆಯುವ ಉದ್ದೇಶದಿಂದ ಆರ್ಥಿಕವಾಗಿ ಹಿಂದುಳಿದ ವರ್ಗ ಎಂದು ನಕಲಿ ದಾಖಲೆಗಳನ್ನು…

ನಾಗರಪಂಚಮಿಗೆ (ಆ. 21) ಉಭಯ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿಗಳಿಗೆ ಸುನಿಲ್ ಕುಮಾರ್ ಮನವಿ

ಕಾರ್ಕಳ : ಉಡುಪಿ ದಕ್ಷಿಣ ಕನ್ನಡ ಉಭಯ ಜಿಲ್ಲೆಗಳಿಗೆ ನಾಡಹಬ್ಬ ನಾಗರ ಪಂಚಮಿ ದಿನ (ಆಗಸ್ಟ್ 21) ಶಾಲಾಕಾಲೇಜು ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸುವಂತೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ…

ಮಂಗಳೂರು : ಗೋದಾಮಿನಲ್ಲಿದ್ದ ಕೋಟ್ಯಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ!

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿದ್ದ ಕೋಟ್ಯಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದೆ. ಒಂದೆಡೆ ಸರಕಾರ ಪಡಿತರ ಅಕ್ಕಿಯನ್ನು ವಿತರಿಸುವ ಕುರಿತು ತಲೆ ಕೆಡಿಸಿಕೊಂಡಿದ್ದರೆ ಮತ್ತೊಂದೆಡೆ ಗೋಡೌನ್ ನಿಂದ ಫಲಾನುಭವಿಗಳಿಗೆ ಸೇರಬೇಕಾಗಿರುವ ಅಕ್ಕಿ…

ಮೂಡಬಿದಿರೆ: ಒಳಚರಂಡಿ ಕೊಳಚೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದರೂ ಕ್ರಮಕ್ಕೆ ಮುಂದಾಗ ಪುರಸಭೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ

ಮೂಡಬಿದಿರೆ: ಒಳಚರಂಡಿಯ ಕೊಳಚೆನೀರು ಬ್ಲಾಕ್ ಆಗಿ ರಸ್ತೆಯ ತುಂಬೆಲ್ಲಾ ಹರಿಯುತ್ತಿದ್ದು ಸುತ್ತಮುತ್ತಲಿನ ಪರಿಸರ ಗಬ್ಬುನಾರುತ್ತಿದ್ದರೂ ಮೂಡಬಿದಿರೆ ಪುರಸಭೆ ಮಾತ್ರ ಈ ಕುರಿತು ಕ್ರಮಕ್ಕೆ ಮುಂದಾಗದೇ ನಿರ್ಲಕ್ಷ್ಯ ವಹಿಸಿದೆ ಎಂದು ಸ್ಥಳೀಯರು ಪುರಸಭಾ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮೂಡಬಿದಿರೆಯ ಸ್ವರಾಜ್ಯ ಮೈದಾನದ…

ಲೋಕಸಭೆ ಚುನಾವಣೆ ಹೊಸ್ತಿಲ್ಲೇ ಬಿಜೆಪಿ ಶಾಕ್! ಕಾಂಗ್ರೆಸ್ ಸೇರ್ಪಡೆಗೆ ಉತ್ಸುಕರಾಗಿರುವ ಬಿಜೆಪಿ ಮುಖಂಡರು: ಮಹತ್ವದ ಮಾಹಿತಿ ನೀಡಿದ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್

ಬೆಂಗಳೂರು: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ನಾಯಕರು ಮತ್ತೆ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದು ಮಾತ್ರವಲ್ಲದೇ ಹಾಲಿ ಬಿಜೆಪಿಯ ಕೆಲ ಪ್ರಭಾವಿ ಶಾಸಕರೂ ಕೂಡ…

ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಶಂಕರ ಅವರಿಗೆ ರಾಷ್ಟ್ರಪತಿ ಪದಕ

ಉಡುಪಿ: ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್ಸ್ಟೇಬಲ್ ಆಗಿರುವ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಶಂಕರ್ ಅವರಿಗೆ ಪೊಲೀಸ್ ಇಲಾಖೆಯಲ್ಲಿನ ಅತ್ಯುತ್ತಮ ಸಾಧನೆಗೆ ರಾಷ್ಟçಪತಿ ಪದಕ ಒಲಿದಿದೆ. ಬಿಜೂರು ಗ್ರಾಮದ ಕಾಡಿನತಾರಿ ನಿವಾಸಿಯಾಗಿರುವ ಶಂಕರ್ ಅವರು ಸುಬ್ಬಯ್ಯ ಪೂಜಾರಿ…

ತಮಿಳುನಾಡಿಗೆ ನೀರು ಹರಿಸುವ ವಿಚಾರ: ನಿರ್ಧಾರ ಪುನರ್ ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿಯ ನಡುವೆಯೂ ರಾಜ್ಯ ಸರ್ಕಾರ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ಪ್ರತಿಪಕ್ಷಗಳು ತೀವೃ ಆಕ್ರೋಶ ವ್ಯಕ್ತಪಡಿಸುತ್ತಿವೆ. ಈ ಕುರಿತು ಪ್ರಾಧಿಕಾರದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಪ್ರತಿನಿತ್ಯ ೧೦…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ರಾಶಿ ಭವಿಷ್ಯ: ಮೇಷ ರಾಶಿ (Aries) : ನಿಮ್ಮ ಹತ್ತಿರವಿರುವ ಜನರನ್ನು ಭೇಟಿಯಾಗುವುದರಲ್ಲಿ ಮತ್ತು ಮನರಂಜನೆಯಲ್ಲಿ ಸಮಯ ಕಳೆಯುತ್ತದೆ‌. ನಿಮ್ಮ ಕೆಲಸದ ಹೊರೆಯನ್ನು ಇತರ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನಿಸಿ, ಇಲ್ಲದಿದ್ದರೆ ನಿಮ್ಮ ವೈಯಕ್ತಿಕ ಕೆಲಸಗಳು ಸ್ಥಗಿತಗೊಳ್ಳಬಹುದು. ಕೋಪದ ಬದಲು ಯಾವುದೇ ಪರಿಸ್ಥಿತಿಯನ್ನು…