Month: August 2023

ನಾಳೆ (ಆ.5) ಮೂಡಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಟೇಬಲ್ ಟೆನ್ನಿಸ್ ಪಂದ್ಯಾಟ -2023

ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ ಮೂಡುಬಿದಿರೆ,ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ…

ಶೌಚಾಲಯದಲ್ಲಿ ವಿಡಿಯೋ ಮಾಡಿದ ವಿದ್ಯಾರ್ಥಿನಿಯೊಬ್ಬಳ ತಂದೆ ಪಿಎಫ್‌ಐ ಕಾರ್ಯಕರ್ತ: ಬಜರಂಗದಳ ದಕ್ಷಿಣ ಪ್ರಾಂತ ಸಂಚಾಲಕ ಸುನಿಲ್ ಕೆಆರ್

ಉಡುಪಿ: ನೇತ್ರಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ಮೂವರು ಆರೋಪಿಗಳಲ್ಲಿ ಶಫಾಳ ತಂದೆ ನಿಷೇಧಿತ ಪಿಎಫ್‌ಐ ಕಾರ್ಯಕರ್ತ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಂಚಾಲಕ ಸುನಿಲ್ ಕೆ.ಆರ್. ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ…

ಪಾಲಡ್ಕ ಗ್ರಾ.ಪಂ ನ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ

ಮೂಡಬಿದಿರೆ : ಪಾಲಡ್ಕ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕಡಂದಲೆ ಫಲ್ಕೆ ಗಣೇಶ ದರ್ಶನ ಸಭಾಭವನದಲ್ಲಿ ನಡೆಯಿತು. ಕಡಂದಲೆ ವಿದ್ಯಗಿರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 83…

ಆಗಸ್ಟ್ 5-6ರಂದು ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕಾರ್ಯಾಗಾರ ಮತ್ತು ಸಾಮಾನ್ಯ ಸಭೆ

ಕಾರ್ಕಳ: ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ರಾಜ್ಯ ಒಕ್ಕೂಟ ಇವರ ಆಶ್ರಯದಲ್ಲಿ ರಾಜ್ಯ ಮಲೆಕುಡಿಯ ಸಂಘ ಕರ್ನಾಟಕ ಹಾಗೂ ಜಿಲ್ಲಾ ಮಲೆಕುಡಿಯ ಸಂಘ (ರಿ.).ಇದರ ಸಹಯೋಗದೊಂದಿಗೆ, ಜೇನು ಕುರುಬ, ಬೆಟ್ಟಕುರುಬ,ಯರವ,ಸೋಲಿಗ,ಕೊರಗಹಸಲರು,ಗೊಂಡ,ಮಲೆಕುಡಿಯ,ಗೌಡ್ಲು,ಸಿದ್ದಿ,ಹಕ್ಕಿಪಿಕ್ಕಿ,ಡೋಂಗ್ರೀ-ಗರಾಸಿಯಾ, ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು…

ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್- ಶಿಕ್ಷೆಗೆ ಮಧ್ಯಂತರ ತಡೆ ನೀಡಿದ ಸುಪ್ರೀಂಕೋರ್ಟ್

ನವದೆಹಲಿ: ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಿಕ್ಷೆಗೆ ಮಧ್ಯಂತರ ತಡೆ ನೀಡಿದೆ. ಗುಜರಾತ್ ಸರ್ಕಾರದ ಮಾಜಿ…

ಉಡುಪಿ : ಖಾಸಗಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ: ಹಿಂದೂ ಸಂಘಟನೆ ಮುಖಂಡರು, ಬಿಜೆಪಿ ನಾಯಕಿ ವಿರುದ್ಧ ಎಫ್‌ಐಆರ್ ದಾಖಲು

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸುವಂತೆ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಇದೀಗ ಪ್ರತಿಭಟನಾಕಾರರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಜುಲೈ 28ರಂದು ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ಸಂಬAಧ…

ಹಳೆಯಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮೂಲ್ಕಿ: ಕಳೆದ 9 ದಿನಗಳಿಂದ ನಾಪತ್ತೆಯಾದ್ದ ವ್ಯಕ್ತಿಯೊಬ್ಬರು ಪಾವಂಜೆ ಬಳಿಯ ರಾಷ್ಟ್ರೀಯ ಹೆದ್ದಾರಿ 66 ಪಕ್ಕದ ಪಾಳುಬಿದ್ದ ಮನೆಯಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿ ಮುಲ್ಕಿಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಗ್ರಾಮದ ಪಾವಂಜೆ ಕದ್ರಾತೋಟ ನಿವಾಸಿ ದೇವದಾಸ್ ಕುಲಾಲ್ (52)…

ನೆಲ್ಲಿಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಡಸ್ಟರ್ ಕಾರು ಪಲ್ಟಿ

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿದ ರೆ‌ನಾಲ್ಟ್ ಡಸ್ಟರ್ ಕಾರೊಂದು ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ತಿರುವಿನಲ್ಲಿ ಪಲ್ಟಿಯಾದ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಶುಕ್ರವಾರ…

ಭಾರತದಲ್ಲಿ ಕಚೇರಿ ತೆರೆದ ಎಲಾನ್ ಮಸ್ಕ್ ಟೆಸ್ಲಾ ಕಂಪನಿ: ಚೀನಾ ವಾಹನ ತಯಾರಕರಿಗೆ ಸಡ್ಡು ಹೊಡೆದ ಕೇಂದ್ರ

ಮುಂಬೈ : ಎಲಾನ್ ಮಸ್ಕ್ ನೇತೃತ್ವದ ಎಲೆಕ್ಟ್ರಿಕ್ ವಾಹನ ತಯಾರಕ ಟೆಸ್ಲಾ ಕಂಪನಿ ಭಾರತದಲ್ಲಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಸಜ್ಜಾಗಿದೆ. ರಿಯಲ್ ಎಸ್ಟೇಟ್ ಅನಾಲಿಟಿಕ್ಸ್ ಒಪ್ಪಂದದ ಪ್ರಕಾರ, ಪುಣೆಯ ಪಂಚಶೀಲ್ ಬ್ಯುಸಿನೆಸ್ ಪಾರ್ಕ್ನಲ್ಲಿರುವ ಬಿ ವಿಂಗ್‌ನ ಮೊದಲ ಮಹಡಿಯಲ್ಲಿ 5,850 ಚದರ…

ಕೇರಳದಲ್ಲಿ ಆರೋಪಿಗಳಿಂದಲೇ ಲಂಚ ಪಡೆದ ಆರೋಪ : ಕೇರಳದ ಪೊಲೀಸರು ವಶಕ್ಕೆ ಪಡೆದಿದ್ದ ಕರ್ನಾಟಕದ ನಾಲ್ವರು ಪೊಲೀಸರ ಅಮಾನತು

ಬೆಂಗಳೂರು: ಕೇರಳದಲ್ಲಿ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಕರ್ನಾಟಕದ ಪೊಲೀಸರು ಆರೋಪಿಗಳಿಂದಲೇ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರು ಪೋಲಿಸರನ್ನು ಅಮಾನತುಗೊಳಿಸಿ ಬೆಂಗಳೂರು ನಗರ ಪೋಲಿಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸಿಪಿಯವರಿಂದ ವರದಿ ತರಿಸಿಕೊಂಡಿದ್ದ ಆಯುಕ್ತರು ಪ್ರಕರಣದ ತನಿಖೆಯಲ್ಲಿ…