Month: September 2023

ಉಡುಪಿ ಜಿಲ್ಲೆಯಾದ್ಯಂತ ಸೆ.15ರಂದು ಸಂವಿಧಾನ ಓದು ಕಾರ್ಯಕ್ರಮ: ಸಕಲ ಸಿದ್ದತೆಗೆ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸೂಚನೆ

ಉಡುಪಿ:ಭಾರತದ ಸಂವಿಧಾನದ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಪೀಠಿಕೆಗೆ ಬದ್ಧರಾಗುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯಾದ್ಯಂತ ಸಂವಿಧಾನ ಪೀಠಿಕೆಯನ್ನು ಒಟ್ಟಾಗಿ ಓದುವ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವಿದ್ಯಾ…

ಕಾರ್ಕಳ: ರಾಜಾಪುರ ಸಾರಸ್ವತ ಸೊಸೈಟಿಯ ವಾರ್ಷಿಕ ಮಹಾಸಭೆ

ಕಾರ್ಕಳ: ಉಭಯ ಜಿಲ್ಲೆಗಳಾದ ಉಡುಪಿ ಹಾಗೂ ದ.ಕ. ಜಿಲ್ಲೆಯಲ್ಲಿ ಕಾರ್ಯವ್ಯಾಪ್ತಿ ಹೊಂದಿರುವ ಕಾರ್ಕಳದ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ.ಅಪರೇಟಿವ್ ಸೊಸೈಟಿಯು 2022-23ನೇ ಸಾಲಿನಲ್ಲಿ 725 ಕೋಟಿ ರೂ. ಮೀರಿ ವ್ಯವಹಾರ ನಡೆಸಿ, 4.15 ಕೋ. ರೂ. ಲಾಭ ಗಳಿಸಿದ್ದು, ಶೇ. 18…

ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನಗೊಳ್ಳಲಿದೆ: ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿಕೆ ಸಿಂಗ್

ದೌಸಾ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದೊಂದಿಗೆ ವಿಲೀನಗೊಳ್ಳಲಿದೆ ಎಂದು ಕೇಂದ್ರ ಸಚಿವ ಮತ್ತು ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿಕೆ ಸಿಂಗ್ ಹೇಳಿದ್ದಾರೆ “ಪಿಒಕೆ ಭಾರತದೊಂದಿಗೆ ತನ್ನಷ್ಟಕ್ಕೆ ವಿಲೀನಗೊಳ್ಳುತ್ತದೆ, ಸ್ವಲ್ಪ ಸಮಯ ಕಾಯಿರಿ” ಎಂದು ಅವರು ರಾಜಸ್ಥಾನದ ದೌಸಾದಲ್ಲಿ ನಡೆದ…

ಅಜೆಕಾರು ದೆಪ್ಪುತ್ತೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ: ಧಾರ್ಮಿಕ ಆಚರಣೆಯ ಜತೆಗೆ ಧರ್ಮ ಜಾಗೃತಿ ಅಗತ್ಯ: ರಾಘವೇಂದ್ರ ಭಟ್

ಅಜೆಕಾರು:ಜಗತ್ತಿನ ಅತ್ಯಂತ ಪುರಾತನ ಧರ್ಮವಾಗಿರುವ ಸನಾತನ ಧರ್ಮದಲ್ಲಿ ಪ್ರತಿಯೊಂದು ಧಾರ್ಮಿಕ ಆಚರಣೆಗೂ ಮಹತ್ವವಿದೆ. ನಮ್ಮ ಧಾರ್ಮಿಕ ಆಚರಣೆಗಳ‌ ಜತೆಗೆ ಧರ್ಮ ಜಾಗೃತಿಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾಡುಹೊಳೆ ಜಂಗಮೇಶ್ವರ ಮಠದ ಪ್ರಧಾನ ಅರ್ಚಕ ವೇ.ಮೂ ರಾಘವೇಂದ್ರ ಭಟ್ ಹೇಳಿದರು. ಅವರು…

ಸರ್ಕಾರಿ ಭೂಮಿ ಒತ್ತುವರಿ ತೆರವು: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಸರ್ಕಾರಿ ಭೂಮಿಯಲ್ಲಿನ ಕಟ್ಟಡ ತೆರವಿಗೆ ಹೈಕೋರ್ಟ್ ಆದೇಶ ನೀಡಿದ್ದು, ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಈ ವಿಚಾರದಲ್ಲಿ ಹೊಣೆಗಾರಿಕೆ ನಿಭಾಯಿಸಿದ ತಪ್ಪಿತಸ್ಥರ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಸರ್ಕಾರಿ ಭೂಮಿಯೊಂದರ ಒತ್ತುವರಿ ಪ್ರಕರಣದಲ್ಲಿ ತೆರವು…

ಚಂದ್ರಯಾನ, ಸೂರ್ಯಯಾನ ಬಳಿಕ ಸಮುದ್ರಯಾನ: ಮತ್ಸ್ಯದಿಂದ ಆಳ ಸಮುದ್ರದಲ್ಲಿ ಸಂಶೋಧನೆ

ನವದೆಹಲಿ: ಬಾಹ್ಯಾಕಾಶದ ಕುತೂಹಲ ತಣಿಸಲು ಯಶಸ್ವಿ ಚಂದ್ರಯಾನ 3, ಸೂರ್ಯಯಾನ ಕೈಗೊಂಡ ಬೆನ್ನಲ್ಲೇ, ಇದೀಗ ಸಮುದ್ರದಾಳದ ಕುತೂಹಲ ತಣಿಸುವ ಸಲುವಾಗಿ ಆಳಸಮುದ್ರಯಾನದತ್ತ ಭಾರತ ಹೆಜ್ಜೆ ಇಟ್ಟಿದೆ. ಸಮುದ್ರದಲ್ಲಿ 500 ಮೀಟರ್ ಆಳಕ್ಕೆ “ಮತ್ಸ್ಯ 6000” ನೌಕೆಯನ್ನು ಕೊಂಡೊಯ್ಯುವ ಪ್ರಯೋಗವನ್ನು 2024ರ ಆರಂಭದಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:12.09.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ) ಕೃಷ್ಣಪಕ್ಷ, ನಕ್ಷತ್ರ:ಆಶ್ಲೇಷಾ, ರಾಹುಕಾಲ 03:31 ರಿಂದ 05:02 ಗುಳಿಕಕಾಲ-12:27 ರಿಂದ 01:59 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:34 ರಾಶಿ ಭವಿಷ್ಯ: ಮೇಷ ರಾಶಿ (Aries)…

ಸರ್ಕಾರದಿಂದ ಬೇಡಿಕೆ ಈಡೇರಿಕೆಯ ಭರವಸೆ: ಬೆಂಗಳೂರು ಬಂದ್ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟ

ಬೆಂಗಳೂರು:ಶಕ್ತಿ ಯೋಜನೆಯಿಂದ ಆಗಿರುವ ನಷ್ಟ ಭರಿಸಲು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿದ್ದ ಹೋರಾಟವನ್ನು ಖಾಸಗಿ ಸಾರಿಗೆ ಒಕ್ಕೂಟವು ಹಿಂದಕ್ಕೆ ಪಡೆದಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಹೋರಾಟಗಾರರ ಜತೆಗೆ ಮಾತುಕತೆ ನಡೆಸಿ…

ಕಟೀಲು: ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಕರಪತ್ರ ಬಿಡುಗಡೆ – ಬಂಟರ ಸಂಘಗಳ ಒಕ್ಕೂಟದಿಂದ ಸಮಾಜಮುಖಿ ಕೆಲಸ: ಲಕ್ಷ್ಮೀನಾರಾಯಣ ಅಸ್ರಣ್ಣ

ಕಟೀಲು: ಕರ್ತವ್ಯ ಮಾಡುವವರನ್ನು ದೇವರು ಯಾವಾಗಲು ಹರಸುತ್ತಾನೆ. ಅದರಂತೆ ಐಕಳ ಹರಿಶ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿದ್ದುಕೊಂಡು ಅತ್ಯುತ್ತಮ ಸಮಾಜಮುಖಿ ಕೆಲಸಗಳನ್ನು ನಿರ್ವಹಿಸುತ್ತಾ ಬಂದಿದ್ದಾರೆ. ಇಂತಹ ಕೆಲಸಕ್ಕೆ ದೇವರ ಆಶೀರ್ವಾದ ಇದೆ ಎಂದು ಕಟೀಲು ದೇವಳದ ಪ್ರಧಾನ ಅರ್ಚಕ…

ಅಜೆಕಾರು : ಕಾರು- ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ

ಅಜೆಕಾರು: ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಅಜೆಕಾರಿನಲ್ಲಿ ಬೈಕ್ ಮತ್ತು ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕಿರಣ್ ಕುಮಾರ್ ಪಿ ಎಂಬವರು ಕಾರಿನಲ್ಲಿ ಮಂಗಳೂರಿನಿಂದ ಅಜೆಕಾರು ಮಾರ್ಗವಾಗಿ ಶಿವಮೊಗ್ಗಕ್ಕೆ ಹೋಗುತ್ತಿದ್ದ…