Month: September 2023

ಕಾರ್ಕಳ: ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ: ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾದರೆ ಸಂವಿಧಾನದ ಆಶಯಗಳು ನಾಶವಾಗುತ್ತವೆ: ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ

ಕಾರ್ಕಳ:ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಮಾತನಾಡಿ,ರಾಜಕೀಯ ಲಾಭಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಹಿಳಾ ಮೀಸಲಾತಿ ಬಿಲ್ ಮಂಡಿಸಿದ್ದಾರೆ,ಆದರೆ ಈ ಮಸೂದೆಯಲ್ಲಿ ಮಹಿಳೆಯರಿಗೆ ಅನ್ಯಾಯವಾಗುತ್ತಿದೆ ಎಂದರು‌. ಮಹಿಳೆಯರನ್ನು ನಿಕೃಷ್ಟವಾಗಿ ಬಿಂಬಿಸಿದ ಮನುವಾದಿಗಳು ಹಾಗೂ ಗೋಲ್ವಾಲ್ಕರ್ ಅವರನ್ನು ಬಿಜೆಪಿಯವರು ಆರಾಧಿಸುತ್ತಾರೆ.ಕೇಂದ್ರದಲ್ಲಿ ಮತ್ತೆ ನರೇಂದ್ರ…

ಪರಶುರಾಮ ಥೀಮ್ ಪಾರ್ಕಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ:ಯೋಜನೆಯ ಕುರಿತು ಅಧಿಕಾರಿಗಳಿಂದ ವರದಿ ಪಡೆದು ಮುಂದಿನ ಕ್ರಮ

ಕಾರ್ಕಳ:ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಸ್ಥಾಪಿಸಲಾಗಿರುವ ಪರಶುರಾಮ ಥೀಮ್ ಪಾರ್ಕಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಭೇಟಿ ಯೋಜನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಪರಶುರಾಮ ಪ್ರತಿಮೆಯ ನೈಜತೆ ಹಾಗೂ ಗುಣಮಟ್ಟದ ವಿಚಾರದಲ್ಲಿ ಸಾರ್ವಜನಿಕ ವಲಯದಲ್ಲಿ ನಡೆದಿರುವ ಪರವಿರೋಧ…

ನ್ಯಾಕ್ ಮರುಮೌಲ್ಯಮಾಪನದಲ್ಲಿ ಕಾರ್ಕಳ ಭುವನೇಂದ್ರ ಕಾಲೇಜಿಗೆ ‘ಎ’ ಗ್ರೇಡ್

ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜು, ಇತ್ತೀಚೆಗೆ ನ್ಯಾಕ್ ಮೌಲ್ಯಮಾಪನದಲ್ಲಿ ತನ್ನ ಹಿರಿಮೆಗೆ ತಕ್ಕ ಅಂಕಗಳನ್ನು ಪಡೆಯದಿದ್ದ ಸಂದರ್ಭದಲ್ಲ್ಲಿ ನವದೆಹಲಿಯ ನ್ಯಾಕ್ ಸಂಸ್ಥೆಗೆ ಮರುಮೌಲ್ಯಮಾಪನಕ್ಕಾಗಿ ಮರು ಮನವಿ ಸಲ್ಲಿಸಿತ್ತು. ಆ ಪ್ರಕಾರ ಕಳೆದ ತಿಂಗಳು ಪ್ರೊ. ಅಮರ್ ರೇ, ಪ್ರಾಧ್ಯಾಪಕರು, ನಾರ್ತ್…

ಕಾರ್ಕಳ : ಕ್ರಿಯೇಟಿವ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ

ಕಾರ್ಕಳ : ಕ್ರಿಯೇಟಿವ್ ಪಿ ಯು ಕಾಲೇಜು ಕಾರ್ಕಳ ಇದರ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಜನಜಾಗೃತಿ ವೇದಿಕೆ ಕಾರ್ಕಳ ತಾಲೂಕು ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಉದಯ…

ಕಲ್ಲಬೆಟ್ಟು : ಗಣೇಶೋತ್ಸವದಲ್ಲಿ ಧನಸಂಗ್ರಹಿಸಿ ಅನಾರೋಗ್ಯ ಪೀಡಿತೆಗೆ ನೆರವು

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸೇರಿ ಆನಾರೋಗ್ಯ ಪೀಡಿತೆಯೋರ್ವರ ಚಿಕಿತ್ಸೆಗಾಗಿ ಧನ ಸಂಗ್ರಹ ಮಾಡಿ ಹಸ್ತಾಂತರ ಮಾಡಿ ಊರವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಾಲೂಕಿನ ಕಲ್ಲಬೆಟ್ಟು ಗ್ರಾಮದ ನಿವಾಸಿಗಳಾದ ಮಹಾವೀರ ಕಾಲೇಜಿನ ವಿದ್ಯಾರ್ಥಿನಿಯರಾದ ತುಷಾರ, ಅನೂಷಾ, ತುಷಿತಾ ಹಾಗೂ…

ಕೋಳಿ ಸಾಕಣೆ ವಾಣಿಜ್ಯ ಚಟುವಟಿಕೆ ಅಲ್ಲ :ತೆರಿಗೆ ವಿಧಿಸಲು ಗ್ರಾಮ ಪಂಚಾಯಿತಿಗೆ ಅಧಿಕಾರವಿಲ್ಲ- ಹೈಕೋರ್ಟ್ ಆದೇಶ

ಬೆಂಗಳೂರು : ಕೋಳಿ ಸಾಕಾಣಿಕೆಯು (ಪೌಲ್ಟ್ರಿ ಫಾರಂ) ಕೃಷಿ ಚಟುವಟಿಕೆಯಾಗಿದ್ದು, ಅದನ್ನು ವಾಣಿಜ್ಯ ಚಟುವಟಿಕೆಯಾಗಿ ಪರಿಗಣಿಸಿ ಕರ್ನಾಟಕ ಗ್ರಾಮ ಸ್ವರಾಜ್​ ಕಾಯ್ದೆಯಡಿ ಯಾವುದೇ ರೀತಿಯ ತೆರಿಗೆ ವಿಧಿಸಲು ಗ್ರಾಮ ಪಂಚಾಯತಿ​ಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಕೃಷಿ ಜಮೀನಿನಲ್ಲಿ ನಿರ್ಮಿಸಿದ ಕೋಳಿ…

ಕನ್ನಡ ವಿಭಾಗ ಮುಂಬಯಿ ವಿವಿ:  ಜಯ ಸಿ. ಸುವರ್ಣ ಸಂಸ್ಮರಣೆ  – ‘ಸುವರ್ಣಯುಗ’ ಕೃತಿ ಬಿಡುಗಡೆ ಮತ್ತು ಗೌರವಾರ್ಪಣೆ ಸಮಾರಂಭ

ಮುಂಬಯಿ : ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ ಆಯೋಜಿಸಿರುವ ಜಯ ಸಿ. ಸುವರ್ಣ ಸಂಸ್ಮರಣೆ, ಸಮಾರಂಭವು ಕಲೀನಾ ಕ್ಯಾಂಪಸ್‍ನ ಕವಿವರ್ಯ ಕುಸುಮಾಗ್ರಜ ಮರಾಠಿ ಭಾಷಾ ಭವನದಲ್ಲಿ ಸೆಪ್ಟೆಂಬರ್ 30ರಂದು ಮಧ್ಯಾಹ್ನ 2:30ಕ್ಕೆ ನಡೆಯಲಿದೆ. ಅಂದು ಕನ್ನಡ ವಿಭಾಗ, ಮುಂಬಯಿ ವಿಶ್ವವಿದ್ಯಾಲಯದ 97ನೆಯ…

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮಂಥನ್ ವ್ಯವಹಾರ ಯೋಜನೆ ಸ್ಪರ್ಧೆ : ನಿಟ್ಟೆ ವಿದ್ಯಾರ್ಥಿಗಳ ಯಕ್ಷಮಿತ್ರಕ್ಕೆ ಆಪ್ ಗೆ ದ್ವಿತೀಯ ಬಹುಮಾನ

ಕಾರ್ಕಳ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಆಯೋಜಿಸಿದ್ದ ಪ್ರತಿಷ್ಠಿತ ಮಂಥನ್ ವ್ಯವಹಾರ ಯೋಜನೆ ಸ್ಪರ್ಧೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಯಕ್ಷಮಿತ್ರ ಆಪ್ ತಂಡವು 2ನೇ ಸ್ಥಾನವನ್ನು ಪಡೆದುಕೊಂಡಿದೆ. ವಿವಿಧ ವಲಯಗಳ 272 ತಂಡಗಳನ್ನು ಒಳಗೊಂಡ…

ಮೂಡುಬಿದಿರೆ : ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಮೂಡಬಿದಿರೆ :ಕಡಂದಲೆ ಶ್ರೀ ಸುಬ್ರಮಣ್ಯ ಸ್ವಾಮಿ ಪ್ರೌಡ ಶಾಲೆಯಲ್ಲಿ ಶ್ರೀ ಕ್ಷೇ ಧ ಗ್ರಾ ಯೋಜನೆಯ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸರ್ವೋದಯ ಶಾಲೆಯ ಶಿಕ್ಷಕ, ರಾಜ್ಯ ಮಟ್ಟದ ತರಬೇತುದಾರರಾದ ಗುರು ಯಂ ಪಿ ಅವರು 30ನಿಮಿಷಗಳ…

ಮುಳ್ಕಾಡು ಪ್ರಾಥಮಿಕ ಶಾಲೆಗೆ ಸಹಾಯಧನ ಹಸ್ತಾಂತರ : ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.50,000 ಸಹಾಯಧನ

ಕಾರ್ಕಳ : ತಾಲೂಕಿನ ಕಡ್ತಲ ಗ್ರಾಮದ ಮುಳ್ಕಾಡು ಕಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶೌಚಾಲಯ ರಚನೆಗೆ ಮಂಜೂರಾದ ರೂ. 50,000 ಸಹಾಯಧನವನ್ನು ಹಸ್ತಾಂತರಿಸಲಾಯಿತು. ಕಡ್ತಲ ಗ್ರಾಮ ಪಂಚಾಯತಿ ಅಧ್ಯಕ್ಷ ಸುಕೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಶ್ರೀ…