Month: November 2023

ವಿಶ್ವಕಪ್ ಕ್ರಿಕೆಟ್ ಸೆಮೀಸ್ ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು: ಕಿವೀಸ್ ಮಣಿಸಿ ಫೈನಲ್ ಗೆ ಲಗ್ಗೆಯಿಟ್ಟ ಟೀಮ್ ಇಂಡಿಯಾ

ಮುಂಬಯಿ: ಲೀಗ್ ಹಂತದ ಎಲ್ಲಾ ಪಂದ್ಯಗಳನ್ನು ಭಾರೀ ಅಂತರದಲ್ಲಿ ಗೆದ್ದು ಸೋಲಿಲ್ಲದ ಸರದಾರ ಎನ್ನಿಸಿಕೊಂಡಿರುವ ಭಾರತ ಸೆಮಿಫೈನಲ್ಸ್ ನಲ್ಲೂ ಗೆಲುವಿನ ಅಭಿಯಾನ ಮುಂದುವರಿಸುವ ಮೂಲಕ ಫೈನಲ್ ಗೆ ಲಗ್ಗೆಯಿಟ್ಟಿದೆ. ಬುಧವಾರ ಮುಂಬಯಿ ನ ವಾಂಖೇಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್…

ಪುತ್ತೂರು: ಸ್ನಾನಕ್ಕೆಂದು ಹೊಳೆಗೆ ಇಳಿದಿದ್ದ ಸಂದರ್ಭದಲ್ಲೇ ಹೃದಯಾಘಾತ: ನವವಿವಾಹಿತ ಯುವಕ ದಾರುಣ ಸಾವು

ಪುತ್ತೂರು: ಸ್ನಾನಕ್ಕೆಂದು ಹೊಳೆಗೆ ಇಳಿದ ಸಂದರ್ಭದಲ್ಲಿಯೇ ಹೃದಯಾಘಾತ ಸಂಭವಿಸಿ, ನವವಿವಾಹಿತ ಯುವಕ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಇರ್ದೆ ಬೆಂದ್ರ್ ತೀರ್ಥ ಎಂಬಲ್ಲಿ ನಡೆದಿದೆ. ಆರ್ಯಾಪು ಗ್ರಾಮದ ಒಳತ್ತಡ್ಕ ನಿವಾಸಿ ಜಿನ್ನಪ್ಪ ಗೌಡ ಎಂಬವರ ಪುತ್ರ ಸುಜಿತ್ (27) ಮೃತ ಯುವಕ.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:16.11.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ, ಶುಕ್ಲ ಪಕ್ಷ, ನಕ್ಷತ್ರ:ಮೂಲ, ರಾಹುಕಾಲ- 01:42 ರಿಂದ 03:08 ಗುಳಿಕಕಾಲ-09:24 ರಿಂದ 10:50 ಸೂರ್ಯೋದಯ (ಉಡುಪಿ) 06:32 ಸೂರ್ಯಾಸ್ತ – 05:58 ದಿನವಿಶೇಷ: ವೃಶ್ಚಿಕ ಸಂಕ್ರಮಣ ರಾಶಿ ಭವಿಷ್ಯ ಮೇಷ…

ಉಡುಪಿ : ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ: ಆರೋಪಿಗೆ 14 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ

ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಗೆ 14 ದಿನ ಪೊಲೀಸ್ ಕಸ್ಟಡಿಗೆ ನೀಡಿ ಉಡುಪಿ ಜೆಎಂಎಫ್‌ಸಿ ಕೋರ್ಟ್ ಆದೇಶಿಸಿದೆ. ಪೊಲೀಸರು ಚೌಗುಲೆಯ ಪ್ರಾಥಮಿಕ ವಿಚಾರಣೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತಾಡಿದ…

ರೈತರಿಗೆ ದೀಪಾವಳಿ ಗಿಫ್ಟ್‌: ಪಿಎಂ ಕಿಸಾನ್‌ ಯೋಜನೆಯ 15ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ರಾಂಚಿ: ದೇಶದ ಕೋಟ್ಯಂತರ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಉಡುಗೊರೆ ನೀಡಿದ್ದಾರೆ. ದೇಶದ 8 ಕೋಟಿ ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15ನೇ ಕಂತನ್ನು ಬುಧವಾರ ಬಿಡುಗಡೆ ಮಾಡಿದ್ದಾರೆ. ಜಾರ್ಖಂಡ್‌ನ ಖುಂಟಿಯಲ್ಲಿ ಬಿರ್ಸಾ ಮುಂಡಾ ಜಯಂತಿಯಂದು…

ಜಮ್ಮು ಕಾಶ್ಮೀರ ಬಳಿ ಕಂದಕಕ್ಕೆ ಉರುಳಿದ ಬಸ್: 38 ಮಂದಿ ದುರ್ಮರಣ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಬಳಿ ಕಡಿದಾದ ಇಳಿಜಾರಿನಲ್ಲಿ ಸುಮಾರು 200 ಮೀಟರ್ ಕೆಳಗೆ ಬಸ್ಸೊಂದು ಉರುಳಿಬಿದ್ದ ಪರಿಣಾಮ 38 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಕಿಶ್ತ್ವಾರ್‌ನಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ ಅಸ್ಸಾರ್ ಪ್ರದೇಶದ ಟ್ರುಂಗಲ್ ಬಳಿ ಕಡಿದಾದ ಇಳಿಜಾರಿನಲ್ಲಿ ಪಲ್ಟಿಯಾಗಿ…

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ಯಾ ಉದಯ್ ಶೆಟ್ಟಿ ಅವರಿಗೆ ಸನ್ಮಾನ

ಕಾರ್ಕಳ: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕುಕ್ಕುಂದೂರು ಬಂಗ್ಲೆಮನೆ ವಿದ್ಯಾ ಉದಯ್ ಶೆಟ್ಟಿ ಇವರನ್ನು ಕುಕ್ಕುಂದೂರು ಬಂಟರ ಸೇವಾ ಸಂಘದ ವತಿಯಿಂದ ಸನ್ಮಾನಿಸಲಾಯಿತು. ವಿದ್ಯಾ ಉದಯ್ ಶೆಟ್ಟಿ ಅವರು 2016 ರಲ್ಲಿ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ರಾಜ್ಯ…

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅಧಿಕಾರ ಸ್ವೀಕಾರ: ಪಕ್ಷದ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದ ಕಟೀಲ್

ಬೆಂಗಳೂರು: ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿವೈ ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಧ್ವಜ ನೀಡುವ ಮೂಲಕ ವಿಜಯೇಂದ್ರ ಅವರಿಗೆ ಅಧಿಕಾರ…

ಬಿಜೆಪಿ ನೂತನ ರಾಜ್ಯಾಧ್ಯಕ್ಷರ ನೇಮಕ ಬೆನ್ನಲ್ಲೇ ಮುನ್ನಲೆಗೆ ಬಂದ ವಿರೋಧ ಪಕ್ಷ ನಾಯಕನ ಆಯ್ಕೆ: ಯಾರಾಗಲಿದ್ದಾರೆ ಪ್ರತಿಪಕ್ಷ ನಾಯಕ?

ಬೆಂಗಳೂರು: ಕಳೆದ ಒಂದು ವರ್ಷದಿಂದ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಕಾರ್ಯಕರ್ತರಿಂದ ತೀವೃ ಒತ್ತಡದ ನಡುವೆ ಕೊನೆಗೂ ಬಿಜೆಪಿ ಹೈಕಮಾಂಡ್ ನೂತನ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದ್ದಾರೆ. ವಿಜಯೇಂದ್ರ ಬುಧವಾರ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಇದೀಗ ಕಳೆದ 7…

ಕುಮಾರಸ್ವಾಮಿ ಮನೆಗೆ ಅಕ್ರಮ ವಿದ್ಯುತ್ ಸಂಪರ್ಕ ಪ್ರಕರಣ: ಜೆಡಿಎಸ್‌ ಕಚೇರಿಯ ಗೋಡೆಗೆ ‘ವಿದ್ಯುತ್‌ ಕಳ್ಳ ಕುಮಾರಸ್ವಾಮಿ’ ಎಂಬ ಪೋಸ್ಟರ್‌ ಅಂಟಿಸಿದ ಕಾಂಗ್ರೆಸ್ ಕಾರ್ಯಕರ್ತರು!

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ದೀಪಾವಳಿಯ ದೀಪಾಲಂಕಾರಕ್ಕೆ ವಿದ್ಯುತ್ ಕದ್ದ ಆರೋಪದಲ್ಲಿ ಅವರ ವಿರುದ್ಧ ಎಫ್ ಐಆರ್ ದಾಖಲಾದ ಬೆನ್ನಲ್ಲೇ, ಈಗ ಅವರ ವಿರುದ್ಧ ಕಾಂಗ್ರೆಸ್ ಪೋಸ್ಟರ್ ವಾರ್ ಶುರು ಮಾಡಿದೆ. ಜೆಡಿಎಸ್ ಕಚೇರಿಯ ಕಾಂಪೌಂಡ್ ಗಳಿಗೆ ವಿದ್ಯುತ್ ಕಳ್ಳ…