Month: February 2024

ಫೆ. 25 ರಂದು ಭಾನುವಾರ ಅಜೆಕಾರಿನಲ್ಲಿ ಉಚಿತ ಹೃದಯದ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ರಾಮಮಂದಿರ ಟ್ರಸ್ಟ್, ಅಜೆಕಾರು, ಸಾರ್ವಜನಿಕ ಶಾರದಾ ಮಹೋತ್ಸವ ಸಮಿತಿ ಅಜೆಕಾರು , ಡಾ. ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಮಾಹೆ ಮಣಿಪಾಲ, ಕಾರ್ಡಿಯಾಲಜಿ ಅಟ್ ಡೋರ್ಸ್ಟೆಪ್ ಫೌಂಡೇಶನ್ (ಕ್ಯಾಡ್) ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ…

ಎಣ್ಣೆಹೊಳೆ ಹಂಚಿಕಟ್ಟೆ ಮಹಾಮ್ಮಾಯಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಗವಂತನನ್ನು ಕಾಣಬೇಕಾದರೆ ಅಂತರಂಗದ ಶುದ್ಧಿಯಾಗಬೇಕು:ಸೋದೆ ಮಠಾಧೀಶ ವಿಶ್ವವಲ್ಲಭ ಶ್ರೀಪಾದರು

ಅಜೆಕಾರು: ಭಗವಂತನನ್ನು ಕಾಣಬೇಕಾದರೆ ನಮ್ಮ ಅಂತರಂಗದ ಶುದ್ಧಿಯಾಗಬೇಕು. ನಮ್ಮೊಳಗಿನ ಕಾಮ,ಕ್ರೋಧ,ಮದ,ಮತ್ಸರಾದಿ ಅರಿಷಡ್ವರ್ಗಗಳನ್ನು ತ್ಯಜಿಸಿದಾಗ ಭಗವಂತನ ಅನುಗ್ರಹ ಪ್ರಾಪ್ತಿಯಾಗಲು ಸಾಧ್ಯ ಎಂದು ಉಡುಪಿ ಸೋದೆ ವಾದಿರಾಜ ಮಠದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಹೇಳಿದರು. ಅವರು ಗುರುವಾರ ಎಣ್ಣೆಹೊಳೆ ಹಂಚಿಕಟ್ಟೆ ಮಹಾಮ್ಮಾಯಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 23.02.2024,ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶರ ಋತು,ಕುಂಭ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಆಶ್ಲೇಷಾ, ರಾಹುಕಾಲ-11:16 ರಿಂದ 12:45 ಗುಳಿಕಕಾಲ-08:20 ರಿಂದ 09:48 ಸೂರ್ಯೋದಯ (ಉಡುಪಿ) 06:53 ಸೂರ್ಯಾಸ್ತ – 06:36 ರಾಶಿ ಭವಿಷ್ಯ: ಮೇಷ ರಾಶಿ: ಇಂದು ನಿಮ್ಮೊಳಗೆ…

ಕಾರ್ಕಳ ಪರ್ಪಲೆಯಲ್ಲಿ ಭೀಕರ ಬೈಕ್ ಅಪಘಾತ: ನಿಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕಾರ್ಕಳ: ಕಾರ್ಕಳ ತಾಲೂಕಿನ ಅತ್ತೂರು ಬಳಿಯ ಪರ್ಪಲೆಯಲ್ಲಿ ಬೈಕ್ ಸ್ಕಿಡ್ಡಾದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ. ನಿಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆಕಾಶ್ ಕಾಂಚನ್(18) ಎಂಬಾತ ಮೃತಪಟ್ಟ ಬೈಕ್ ಸವಾರ.…

ಬಿಜೆಪಿ ರಾಜ್ಯ ಯುವಮೋರ್ಚಾ ಕಾರ್ಯದರ್ಶಿಯಾಗಿ ವಿಖ್ಯಾತ್ ಶೆಟ್ಟಿ ಕಾರ್ಕಳ ಆಯ್ಕೆ

ಕಾರ್ಕಳ: ರಾಜ್ಯ ಬಿಹೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿ ಉಡುಪಿ ಜಿಲ್ಲಾ ಹಾಲಿ ಯುವಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಕಾರ್ಕಳ ಇವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ವಿಖ್ಯಾತ್ ಶೆಟ್ಟಿ ಯವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ವಿಖ್ಯಾತ್…

ಶಿವಪುರ: ಹಾಡು ಹಗಲೇ ಒಂಟಿ ವೃದ್ಧೆಯ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ

ಹೆಬ್ರಿ: ವಯೋವೃದ್ಧ ಒಂಟಿ ಮಹಿಳೆಯ ಮನೆಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಏಕಾಎಕಿ ಟೇಬಲ್ ಮೇಲಿದ್ದ ಮೊಬೈಲ್ ಹಾಗೂ ವೃದ್ಧೆಯ ಕುತ್ತಿಗೆಯಲ್ಲಿದ್ದ 40 ಗ್ರಾಂ ಚಿನ್ನಾಭರಣ ದೋಚಲು ವಿಫಲ ಯತ್ನ ನಡೆಸಿ ಪರಾರಿಯಾಗಿದ್ದಾರೆ. ಹೆಬ್ರಿ ತಾಲೂಕಿನ ಶಿವಪುರ ಎಂಬಲ್ಲಿ ಈ‌ ಘಟನೆ ನಡೆದಿದ್ದು…

ರಾಮ ದೇವರೇ ಅಲ್ಲ:ಕಾಂಗ್ರೆಸ್ ಮುಖಂಡ ವಿ.ಎಸ್ ಉಗ್ರಪ್ಪ ವಿವಾದಾತ್ಮಕ ಹೇಳಿಕೆ: ಪ್ರಧಾನಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ

ವಿಜಯನಗರ: ಅಯೋಧ್ಯೆ ರಾಮಮಂದಿರದ ಲೋಕಾರ್ಪಣೆಯಾದ ದಿನದಿಂದ ರಾಮನ ಕುರಿತು ಕಾಂಗ್ರೆಸ್ ಮುಖಂಡರು ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದು,ಇದೀಗ ಕೈ ಮುಖಂಡ ಉಗ್ರಪ್ಪ ರಾಮನ ಕುರಿತು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು ಇದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಕೋಟ್ಯಾಂತರ ಹಿಂದೂಗಳು ಶ್ರದ್ಧಾಭಕ್ತಿಯಿಂದ ಆರಾಧಿಸುವ,…

ಮಕ್ಕಳನ್ನು ಶಾಲೆಯತ್ತ ಸೆಳೆಯಲು ಸರ್ಕಾರದ ಹೊಸ ತಂತ್ರ: ವಾರದಲ್ಲಿ ಮೂರು ದಿನ ಶಾಲೆಗಳಲ್ಲಿ ರಾಗಿ ಮಾಲ್ಟ್ ವಿತರಣೆಗೆ ಇಂದು ಸಿಎಂ ಚಾಲನೆ

ಬೆಂಗಳೂರು :ಶಾಲೆಗಳಿಂದ ದೂರ ಉಳಿಯುವ ಮಕ್ಕಳನ್ನು ಶಾಲೆಯತ್ತ ಸೆಳೆಯಲು ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಶಾಲಾ ಮಕ್ಕಳಿಗಾಗಿಯೇ ಹೊಸ ಯೋಜನೆಯೊಂದನ್ನು ಜಾರಿ ಮಾಡಿದೆ. ರಾಜ್ಯದ 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 22.02.2024,ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶರ ಋತು,ಕುಂಭ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಪುಷ್ಯಾ, ರಾಹುಕಾಲ-02:13 ರಿಂದ 0341 ಗುಳಿಕಕಾಲ-09:48 ರಿಂದ 11:17 ಸೂರ್ಯೋದಯ (ಉಡುಪಿ) 06:54 ಸೂರ್ಯಾಸ್ತ – 06:36 ರಾಶಿ ಭವಿಷ್ಯ: ಮೇಷ ರಾಶಿ: ಇಂದು ನೀವು…

ಸಚಿವೆ ಕರಂದ್ಲಾಜೆಗೆ ಕಗ್ಗಂಟಾದ ಉಡುಪಿ ಚಿಕ್ಕಮಗಳೂರು ಕ್ಷೇತ್ರ!: ಬಿಜೆಪಿ ಕಾರ್ಯಕರ್ತರಿಂದಲೇ ಶೋಭಾ ವಿರುದ್ಧ ಪತ್ರ ಅಭಿಯಾನ

ಚಿಕ್ಕಮಗಳೂರು: ಹಾಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಸಂಕಷ್ಟ ಎದುರಾಗಿದ್ದು ತಾವು ಕಳೆದ ಬಾರಿ ಸ್ಪರ್ಧಿಸಿದ್ದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ವಪಕ್ಷೀಯರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಾರಿ ಚುನಾವಣೆಯಲ್ಲಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆಗೆ…