Month: March 2024

ಎರ್ಲಪಾಡಿ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ವಶ

ಕಾರ್ಕಳ: ಸುವರ್ಣಾ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕರುಣಾಕರ ಎಂಬಾತ ಎರ್ಲಪಾಡಿ ಗ್ರಾಮದ ಹೆರಂಜೆ ಎಂಬಲ್ಲಿನ ಸುವರ್ಣಾ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ನಗರ…

ನಾಳೆ (ಮಾ.6ರಂದು) ಮಾಳದಲ್ಲಿ ಅಕ್ಷಯ ಇಂಡಸ್ಟ್ರೀಸ್ ಶುಭಾರಂಭ

ಕಾರ್ಕಳ: ಕಾರ್ಕಳ ತಾಲೂಕಿನ ಮಾಳ ಗ್ರಾಮದ ನೈ ಪಡೀಲ್ ಎಂಬಲ್ಲಿ ಇಂಟರ್‌ಲಾಕ್ ಹಾಗೂ ಪ್ರೀಕ್ಯಾಸ್ಟ್ ವಾಲ್ಸ್ ಉತ್ಪಾದನಾ ಘಟಕ ಅಕ್ಷಯ ಇಂಡಸ್ಟ್ರೀಸ್ ನಾಳೆ (ಮಾ.6ರಂದು) ಶುಭಾರಂಭಗೊಳ್ಳಲಿದೆ. ನೂತನ ಉದ್ಯಮವನ್ನು ನಿವೃತ್ತ ತಹಶೀಲ್ದಾರ್ ಶಾಂತರಾಮ ಚಿಪ್ಲೂಣ್ಕರ್ ಉದ್ಘಾಟಿಸಲಿದ್ದು, ಕಾರ್ಕಳ ಶೇಷಾದ್ರಿ ಕ್ಯಾಶ್ಯೂಸ್ ಮಾಲಕ…

ಅಕ್ರಮ ಹಣ ವರ್ಗಾವಣೆ ಪ್ರಕರಣ :ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣ ರದ್ದುಪಡಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಪಡಿಸಿ ಆದೇಶಿಸಿದೆ.ಡಿಕೆಶಿ ವಿರುದ್ಧದ ಇಡಿ 120 ಬಿ ಪ್ರಕರಣದಲ್ಲಿ ಈ‌‌ ಹಿಂದೆ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಈ…

ನಾಸೀರ್ ಹುಸೇನ್’ಗೆ ಪ್ರಮಾಣ ವಚನ ಬೋಧನೆ ಮಾಡದಂತೆ ಉಪ ರಾಷ್ಟ್ರಪತಿಗೆ ಬಿಜೆಪಿ ಪತ್ರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಳಗಾವಿ: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ನಾಸೀರ್ ಹುಸೇನ್ ಅವರನ್ನು ನಾಲ್ಕನೇ ಅಪರಾಧಿಯನ್ನಾಗಿ ಮಾಡಬೇಕು. ತನಿಖೆ ಪೂರ್ಣಗೊಳ್ಳುವವರೆಗೂ ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧನೆ ಮಾಡದಂತೆ ಉಪರಾಷ್ಟ್ರಪತಿಗೆ ಬಿಜೆಪಿ ಪತ್ರ ಬರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.…

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರು ಸೇರಿದಂತೆ 7 ರಾಜ್ಯಗಳಲ್ಲಿ ಎನ್ಐಎ ದಾಳಿ

ನವದೆಹಲಿ: ರಾಷ್ಟ್ರೀಯ ತನಿಖಾ ದಳ (NIA) ಕರ್ನಾಟಕ ಸೇರಿದಂತೆ ದೇಶದ 7 ರಾಜ್ಯಗಳ 17 ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿದೆ. ಎನ್ಐಎ ಬೆಂಗಳೂರಿನ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದ ಪ್ರಕರಣದ ಅಧಿಕೃತ ತನಿಖೆ ನಡೆಸುತ್ತಿದೆ.…

ಪಾಕ್‌ ಪರ ಘೋಷಣೆಯ FSL ವರದಿ ಬಹಿರಂಗ ಪಡಿಸಿ: ಬಿಜೆಪಿ ನಿಯೋಗದಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಪರಚಾಗಿ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಕೂಗಿದ ಪ್ರಕರಣ ಸಂಬಂಧ ವಿಧಿ ವಿಜ್ಞಾನ ಪ್ರಯೋಗಾಲಯದ (FSL) ವರದಿಯನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬೆಂಗಳೂರು ನಗರ ಬಿಜೆಪಿ ಶಾಸಕರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:05.03.2024, ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಮೂಲಾ, ರಾಹುಕಾಲ-03:41 ರಿಂದ 05:10 ಗುಳಿಕಕಾಲ-12:42 ರಿಂದ 02:12 ಸೂರ್ಯೋದಯ (ಉಡುಪಿ) 06:47 ಸೂರ್ಯಾಸ್ತ – 06:38 ರಾಶಿ ಭವಿಷ್ಯ : ಮೇಷ ರಾಶಿ: ಯಾವುದೇ…

ಬೈಲೂರು ಗ್ರಾಮ‌ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯಿತಿ ಸುಲಲಿತ ಆಡಳಿತಕ್ಕೆ ಮೂಲಸೌಕರ್ಯ ಅವಶ್ಯಕ: ಶಾಸಕ‌ ಸುನಿಲ್ ಕುಮಾರ್

ಕಾರ್ಕಳ: ಅಭಿವೃದ್ದಿ ಚಟುವಟಿಕೆಗಳು ನಿರಂತರ ಪ್ರಕ್ರಿಯೆಯಾಗಿದೆ‌.ಗ್ರಾಮ ಪಂಚಾಯಿತಿಗಳಲ್ಲಿ ಸುಲಲಿತ ಆಡಳಿತ ನಡೆಯಬೇಕಾದರೆ ಸುಸಜ್ಜಿತ ಕಟ್ಟಡ, ಆಧುನಿಕ ಸೌಲಭ್ಯಗಳುಳ್ಳ ಕಚೇರಿ ಸೇರಿದಂತೆ ಮೂಲಸೌಕರ್ಯಗಳು ಅತ್ಯಾವಶ್ಯಕ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಸೋಮವಾರ ಬೈಲೂರು ಗ್ರಾಮ‌ ಪಂಚಾಯಿತಿ ನೂತನ ಕಟ್ಟಡದ ಉದ್ಘಾಟನಾ…

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಮೂವರು ಆರೋಪಿಗಳ ಬಂಧನ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವಿನ ಸಂಭ್ರಮಾಚರಣೆಯಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಾದ ಇಲ್ತಾಜ್, ಮುನಾವರ್ ಹಾಗೂ ಮೊಹಮ್ಮದ್ ನಾಶಿಪುಡಿ ಅವರನ್ನು ವಿಧಾನಸೌಧ ಪೊಲೀಸ್…

ಅಲ್ಪಸಂಖ್ಯಾತರ ಮೇಲಿನ ಪ್ರಕರಣ ಮುಚ್ಚಿ ಹಾಕಲು ಪೊಲೀಸರಿಗೆ ಸೂಚನೆ: ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ

ಬೆಂಗಳೂರು: ಅಲ್ಪಸಂಖ್ಯಾತರ ಮೇಲಿನ ಪ್ರಕರಣಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಸರ್ಕಾರ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಬಾಂಬ್ ಸ್ಪೋಟ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಮೇಲಿನ ಗಂಭೀರ…