Month: May 2024

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸ್ಪೋಟಕ ತಿರುವು: ಪೆನ್ ಡ್ರೈವ್ ಹಂಚಿಕೆ ವಿಚಾರದಲ್ಲಿ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ಹೆಸರು ಪ್ರಸ್ತಾಪ!

ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ಹಗರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ಅವರ ಹೆಸರು ಕೂಡ ತಳಕು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ಪ್ರಜ್ವಲ್ ರೇವಣ್ಣ ವಿರುದ್ದದ…

ಕಾರ್ಕಳ: ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿಯ ವೈದ್ಯಕೀಯ ವೆಚ್ಚ ನೀಡದೇ ವಂಚನೆ: ಬೈಕ್ ಸವಾರನ‌ ವಿರುದ್ಧ ದೂರು

ಕಾರ್ಕಳ: ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೂ,ಅಪಘಾತ ಎಸಗಿದ ಬೈಕ್ ಸವಾರ ವೈದ್ಯಕೀಯ ವೆಚ್ಚ ನೀಡದೇ ವಂಚಿಸಿದ ಪ್ರಕರಣದ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಕಾರ್ಕಳ ದಾನಶಾಲೆ ನಿವಾಸಿ…

ಮೇ 13 ಹಾಗೂ 14ರಂದು ಮುದ್ರಾಡಿ ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರದಲ್ಲಿ ಕೊರಗಜ್ಜ ದೈವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಕೊರಗಜ್ಜ ಮೂರ್ತಿ ಪ್ರತಿಷ್ಠೆ, ಹರಕೆಯ ನೇಮೋತ್ಸವ

ಹೆಬ್ರಿ :ಹೆಬ್ರಿ ತಾಲೂಕಿನ ಮುದ್ರಾಡಿಯ ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರದಲ್ಲಿ ಸುಮಾರು 50 ವರ್ಷಗಳ ಹಿಂದಿನ ಕೊರಗಜ್ಜ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯದ ಧಾರ್ಮಿಕ ಕಾರ್ಯಕ್ರಮವು ಮೇ 13 ಹಾಗೂ14 ರಂದು ನಡೆಯಲಿದೆ. ಈ ಪ್ರಯುಕ್ತ ಸೋಮವಾರ ಸಂಜೆ 4 ಗಂಟೆಯಿಂದ ಹೆಬ್ರಿ ಕೆಳಪೇಟೆಯಿಂದ…

ಬೆಂಗಳೂರು: ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆ; ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಬೆಂಗಳೂರು: ಕೆಎಎಸ್ ಅಧಿಕಾರಿಯ ಪತ್ನಿ ಹೈಕೋರ್ಟ್‌ ವಕೀಲರಾದ ಚೈತ್ರಾಗೌಡ ಅವರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ನಿವಾಸದಲ್ಲಿ ಫ್ಯಾನ್​​ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ ಚೈತ್ರಾಗೌಡ ಅವರು ಇಂದು ಸಂಜಯ್ ​ನಗರದಲ್ಲಿರುವ ತಮ್ಮ…

ಸರ್ಕಾರ ನಿಗದಿಪಡಿಸಿದಕ್ಕಿಂತ ಹೆಚ್ಚಿನ ಶುಲ್ಕ ಪಡೆದರೆ ಶಾಲೆಗಳ ಮಾನ್ಯತೆ ರದ್ದು: ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

ಶಿವಮೊಗ್ಗ:ಈ ಬಾರಿಯ ಶೈಕ್ಷಣಿಕ ವರ್ಷ ಇನ್ನೇನು ಆರಂಭವಾಗಲಿದ್ದು,ಈಗಾಗಲೇ ಶಾಲಾ ದಾಖಲಾತಿ ಆರಂಭಗೊಂಡಿದೆ. ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರ ನಿಗದಿ ಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿಗಳಿಂದ ಹೆಚ್ಚಿನ ಶುಲ್ಕ ಪಡೆದರೆ ಅಂತಹ ಶಾಲೆಗಳ ಮಾನ್ಯತೆಯನ್ನೇ…

ಪಾಕ್ ಆಕ್ರಮಿತ ಕಾಶ್ಮೀರದ ಪ್ರತಿ ಇಂಚೂ ಭಾರತದ್ದು:ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

ಖುಂಟಿ (ಜಾರ್ಖಂಡ್):ಪಾಕ್ ಆಕ್ರಮಿತ ಕಾಶ್ಮೀರದ ಪ್ರತೀ ಭಾಗವೂ ಭಾರತಕ್ಕೆ ಸೇರಿದ್ದು, ಇದನ್ನು ಯಾರಿಗೂ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ದಾರೆ. ಅವರು ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಪಾಕ್ ಪರಮಾಣು ಬಾಂಬ್ ಹೊಂದಿದೆ.…

ಪಾಕಿಸ್ತಾನಕ್ಕೆ ಗೌರವ ನೀಡಿ,ಇಲ್ಲವಾದರೆ ಭಾರತಕ್ಕೆ ಅಣು ಬಾಂಬ್ ಹಾಕುತ್ತಾರೆ: ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ವಿವಾದಾತ್ಮಕ ಹೇಳಿಕೆ

ನವದೆಹಲಿ: ಭಾರತವು ಪಾಕಿಸ್ತಾನದೊಂದಿಗೆ ಸೌಹಾರ್ದ ಸಂಬಂಧ ಬೆಳೆಸಿಕೊಳ್ಳಬೇಕು,ಇದಲ್ಲದೇ ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸಬೇಕು ಇಲ್ಲವಾದರೆ ಭಾರತದ ಮೇಲೆ ಅಣು ಬಾಂಬ್ ದಾಳಿಯಾಗಬಹುದು ಎಂದು ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ವಿವಾದಾತ್ಮಕ ಹೇಳಿಕೆ ನೀಡಿದ್ದು,ಚುನಾವಣಾ ಹೊತ್ತಲ್ಲೇ ಕಾಂಗ್ರೆಸ್ ಗೆ ಭಾರೀ ಮುಜುಗರವಾಗಿದೆ. ಭಾರತವು…

ಅಬಕಾರಿ ಹಗರಣದ ಪ್ರಮುಖ ಆರೋಪಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಬಿಗ್ ರಿಲೀಫ್!:  ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ…

ಎನ್ಐಎ ಭರ್ಜರಿ ಭೇಟೆ: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿ‌ ಮುಸ್ತಫಾ ಬಂಧನ

ಹಾಸನ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಸುಳ್ಯ ಶಾಂತಿನಗರದ ಮೊಹಮ್ಮದ್ ಮುಸ್ತಫಾನನ್ನು ರಾಷ್ಟ್ರೀಯ ತನಿಖಾ ತಂಡ ಸಕಲೇಶಪುರದಲ್ಲಿ ಬಂಧಿಸಿದೆ. ಈ ಹತ್ಯೆ ಪ್ರಕರಣದಲ್ಲಿ ಈಗಾಗಲೇ…

ಅಜೆಕಾರಿನಲ್ಲಿ ಶಿವಂ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್’ನ ನವೀಕೃತ ಮಳಿಗೆ ಉದ್ಘಾಟನೆ

ಕಾರ್ಕಳ:ಕಳೆದ 15 ವರ್ಷಗಳಿಂದ ಗೃಹೋಪಯೋಗಿ ವಸ್ತುಗಳು,ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಪೀಠೋಪಕರಣಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ ಕಾರ್ಕಳದ ಶಿವಂ ಎಲೆಕ್ಟ್ರಾನಿಕ್ಸ್ ಇದರ ನವೀಕೃತ ಶಾಖೆಯು ಅಜೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ, ಸಹಕಾರಿ ಸೌಧ ಕಟ್ಟಡದಲ್ಲಿ ಅಕ್ಷಯ ತೃತೀಯ ದಿನವಾದ ಶುಕ್ರವಾರ…