Month: May 2024

ಮಂಜರಪಲ್ಕೆ: ಬೈಕ್-ಟಿಪ್ಪರ್ ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ:ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಕಾರ್ಕಳ ತಾಲೂಕಿನ ಮಂಜರಪಲ್ಕೆ ಸಮೀಪದ ವೀರ ಮಾರುತಿ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಪ್ರಶಾಂತ್ ಎಂಬವರು ಗಾಯಗೊಂಡಿದ್ದಾರೆ. ಅವರು…

ಶಾಸಕರಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ: ಆಡಳಿತದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ: ಸುನೀಲ್ ಕುಮಾರ್ ಆರೋಪ

ಬೆಂಗಳೂರು: ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳ್ಳಲಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವಿ ಸುನೀಲ್ ಕುಮಾರ್, ಕಳೆದ ಒಂದು ವರ್ಷದಲ್ಲಿ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ…

ಪ್ರತಿಕೂಲ ಹವಾಮಾನದ ಎಫೆಕ್ಟ್: ಗೇರು, ಮಾವು ಇಳುವರಿಯಲ್ಲಿ ಭಾರೀ ಕುಸಿತ: ಕಂಗಾಲಾದ ಬೆಳೆಗಾರರು

ವಿಶೇಷ ವರದಿ: ಕೃಷ್ಣ ಎನ್ ಅಜೆಕಾರ್ ರಾಜ್ಯದ ಪ್ರಮುಖ ತೋಟಗಾರಿಕಾ ಬೆಳೆಗಳಾದ ಗೇರು ಹಾಗೂ ಮಾವಿನ ಫಸಲು ಈ ಬಾರಿ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದಕ್ಕೆ ಪ್ರಮುಖ ಕಾರಣ ಹವಾಮಾನ ವೈಪರೀತ್ಯ, ಅತಿಯಾದ ಉಷ್ಣಾಂಶದ ಪರಿಣಾಮವಾಗಿ ನಿರ್ದಿಷ್ಟ ಕಾಲದಲ್ಲಿ ಹೂವು…

ಕಾರ್ಕಳ: ಅಕ್ರಮ ಮರಳು ಸಾಗಾಟದ ಲಾರಿ ವಶ

ಕಾರ್ಕಳ: ಮಂಗಳೂರಿನಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಾರ್ಕಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶೇಖ್ ಶವತ್ ಹಾಗೂ ಮುಬಾರಕ್ ಎಂಬವರು ಮಂಗಳೂರಿನ ಅಡ್ಢೂರು ಹೊಳೆಯಿಂದ ಪರವಾನಿಗೆ ಪಡೆಯದೇ ಅಕ್ರಮವಾಗಿ ಟಿಪ್ಪರ್ ಮೂಲಕ ಕಾರ್ಕಳದ ಅನಂತಶಯನದ ಕಟ್ಟಡ ಕಾಮಗಾರಿಗೆ ಮರಳು ಸಾಗಾಟ ಮಾಡುತ್ತಿದ್ದ…

ಅಶ್ಲೀಲ ವಿಡಿಯೋ ಪ್ರಕರಣ: ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ: ಇಂದು ರಾತ್ರಿ ಬೆಂಗಳೂರಿಗೆ ಆಗಮನ ನಿರೀಕ್ಷೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಕುರಿತಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು 3 ವಾರಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಎಸ್ಐಟಿಗೆ ತಲೆ ನೋವಾಗಿ ಪರಿಣಮಿಸಿದೆ. ಇದೀಗ ಮೇ 15ರ ಬುಧವಾರ ಪ್ರಜ್ವಲ್ ರೇವಣ್ಣ ಟಿಕೆಟ್ ಬುಕ್ ಮಾಡಿದ್ದು, ಬಿಸಿನೆಸ್ ಕ್ಲಾಸ್ ಟಿಕೆಟ್ ಬುಕ್…

ಕುಂಟಾಡಿ: ಬೈಕ್ ಡಿಕ್ಕಿಯಾಗಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಗಾಯ

ಕಾರ್ಕಳ:ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಪಾದಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ. ಪಳ್ಳಿ ಕಡೆಯಿಂದ ಕಾರ್ಕಳ ಕಡೆಗೆ ಬೈಕ್ ಸವಾರ ಅತೀ ವೇಗವಾಗಿ ಬೈಕ್ ಚಲಾಯಿಸಿ ಕಲ್ಯಾ ಗ್ರಾಮದ ಕುಂಟಾಡಿ ಬಿಲ್ಲವ ಸಂಘದ…

ಗಂಜಿಮಠ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ, ಅಭಿನಂದನಾ ಕಾರ್ಯಕ್ರಮ

ಮಂಗಳೂರು: ಮರಾಠಿ ಸಮಾಜ ಸೇವಾ ಸಂಘ(ರಿ) ಗಂಜಿಮಠ ಮಂಗಳೂರು ಇದರ 4ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರ ಹಾಗೂ ವೈದ್ಯಕೀಯ ನೆರವು ವಿತರಣಾ ಕಾರ್ಯಕ್ರಮವು ಗಂಜಿಮಠದ ಮರಾಠಿ ಸಮಾಜ…

ಸಿಡಿಲಿನಿಂದ ಆಗುವ ಅನಾಹುತ ತಪ್ಪಿಸಲು ಕೆಲವು ಮಹತ್ವದ ಸೂಚನೆಗಳು

ಮಂಗಳೂರು: ಈಗಾಗಲೇ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು ಮಳೆಯ ಜತೆ ಸಿಡಿಲಿನ ಅಬ್ಬರವೂ ಕೂಡ ಜೋರಾಗಿದೆ. ಇತ್ತೀಚಿನ ದಿನಗಳಲ್ಲಿ ಸಿಡಿಲಿನಿಂದ ಸಾಕಷ್ಟು ಜನ,ಜಾನುವಾರುಗಳು ಮೃತಪಟ್ಟಿರುವ ಪ್ರಕರಣಗಳು ನಡೆದಿದ್ದು,ಈ ಹಿನ್ನೆಲೆಯಲ್ಲಿ ಅನಾಹುತವನ್ನು ತಪ್ಪಿಸುವ ಸಲುವಾಗಿ ಕರಾವಳಿಗರು ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬುವುದನ್ನು ರಾಷ್ಟಿಯ…

ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಗೆದ್ದ ತಕ್ಷಣವೇ ಜೈಲಿನಿಂದ ಬಿಡುಗಡೆ : ಸಿಎಂ ಅರವಿಂದ್ ಕೇಜ್ರಿವಾಲ್ ವಿಶ್ವಾಸ

ನವದೆಹಲಿ: ದೆಹಲಿಯ ಮತದಾರರು ಆಮ್ ಆದ್ಮಿ ಪಕ್ಷದ ನಾಯಕರನ್ನು ಅವರ ಕೆಲಸದಿಂದಾಗಿ ಗೌರವಿಸುತ್ತಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯ ಮತದಾನಕ್ಕೂ ಮುನ್ನ ಕೇಜ್ರಿವಾಲ್ ಭಾನುವಾರ ಪಕ್ಷದ ಹಿರಿಯ ನಾಯಕರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದರು. ತಮ್ಮ ಅನುಪಸ್ಥಿತಿಯಲ್ಲಿ…

ಬೇಸಿಗೆ ಶಿಬಿರ ವಿದ್ಯಾರ್ಥಿಗಳ ಪ್ರತಿಭೆಗೊಂದು ವೇದಿಕೆ:ಶಿಕ್ಷಕ ದೇವದಾಸ್ ಕೆರೆಮನೆ

ಕಾರ್ಕಳ: ಮಾನಸ ಕಲಾ ಶಾಲೆಯು ಕಳೆದ 25 ವರ್ಷಗಳಿಂದ ಗ್ರಾಮೀಣ ಬಡ ಮಕ್ಕಳಿಗೆ ಸೇವಾ ರೂಪದ ಚಿತ್ರ ಕಲಾ ಶಿಕ್ಷಣ ಪ್ರಾರಂಭಿಸಿ, ತನ್ನ ಸಂಸ್ಥೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಬೇಸಿಗೆ ಶಿಬಿರವನ್ನು ಆಯೋಜಿಸಿ ನಡೆಸುತ್ತಿದೆ. ಮಾನಸ ಕಲಾ ಸಂಸ್ಥೆ ಕಲಾ ವೈವಿಧ್ಯತೆಯ ಪ್ರತೀಕ.…